ಪುತ್ತೂರು:ಅಕ್ರಮ ಮದ್ಯ ಮಾರಾಟ ಪ್ರಕರಣದ ಆರೋಪಿಯಾಗಿ ವಿಚಾರಣೆ ಎದುರಿಸುತ್ತಿದ್ದ ಕೈಕಾರ ನಿವಾಸಿ ಯಜ್ಞಾತ ರೈ ಅವರನ್ನು ಪುತ್ತೂರು ನ್ಯಾಯಾಲಯ ದೋಷಮುಕ್ತಗೊಳಿಸಿ ತೀರ್ಪು ನೀಡಿದೆ.
2023ರ ಮಾ.13ರಂದು ಕೈಕಾರ ಎಂಬಲ್ಲಿ ಗುಡ್ಡದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಮಾಹಿತಿಯಾಧರಿಸಿ ಕಾರ್ಯಾಚರಣೆ ನಡೆಸಿದ್ದ ಸಂಪ್ಯ ಪೊಲೀಸರು ಕೈಕಾರ ನಿವಾಸಿ ಯಜ್ಞಾತ ರೈ ಅವರನ್ನು ಬಂಧಿಸಿ ಅಕ್ರಮ ಮದ್ಯ ಮತ್ತು ನಗದನ್ನು ವಶಕ್ಕೆ ಪಡೆದುಕೊಂಡಿದ್ದರು. ತನಿಖೆ ನಡೆಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿದೆ. ಆರೋಪಿ ಪರ ವಕೀಲರಾದ ಮಾಧವ ಪೂಜಾರಿ, ರಾಕೇಶ್ ಬಲ್ನಾಡು, ಮಮತಾ ಶೆಟ್ಟಿ ವಾದಿಸಿದ್ದರು.