ಆರೋಪಿಗೆ ಪುತ್ತೂರು ಜಿಲ್ಲಾ ನ್ಯಾಯಾಲಯದಿಂದ ಜಾಮೀನು
ಪುತ್ತೂರು: 7 ವರ್ಷದ ಹಿಂದೆ ಸುಳ್ಯದಲ್ಲಿ ವಿದ್ಯಾರ್ಥಿನಿಯೊಬ್ಬರನ್ನು ಚೂರಿಯಿಂದ ತಿವಿದು ಕೊಲೆ ಮಾಡಿದ್ದ ಪ್ರಕರಣದ ಆರೋಪಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಸುಳ್ಯದ ನೆಹರೂ ಸ್ಮಾರಕ ಪದವಿ ಕಾಲೇಜಿನ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿಯಾಗಿದ್ದ ಅಕ್ಷತಾ ಅವರನ್ನು ಅದೇ ಕಾಲೇಜಿನ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ ಕಾರ್ತಿಕ್ ಎಂಬಾತ 2018ರ ಫೆ.20ರಂದು ಸುಳ್ಯ ರಥಬೀದಿಯ ಬಳಿ ಚೂರಿಯಿಂದ ತಿವಿದು ಕೊಲೆ ಮಾಡಿದ್ದ ಎಂದು ಆರೋಪಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದರು.
ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗೆ ಇದೀಗ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಆರೋಪಿ ಪರ ವಕೀಲರಾದ ಮಾಧವ ಪೂಜಾರಿ ಮತ್ತು ರಾಕೇಶ್ ಬಲ್ನಾಡು ವಾದಿಸಿದ್ದರು.