ಪುತ್ತೂರು: ದಿನ್ ದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಭಾರತ ಸರಕಾರದ ಪಂಚಾಯತ್ ರಾಜ್ ಮತ್ತು ಗ್ರಾಮೀಣಭಿವೃದ್ಧಿ ಇಲಾಖೆ, ರಾಜ್ಯ ಕೌಶಲ್ಯಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ದಕ್ಷಿಣಕನ್ನಡ ಜಿಲ್ಲೆ ಪುತ್ತೂರು ತಾಲೂಕು ಶ್ರೀ ದುರ್ಗಂಬಿಕಾ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.26ರಂದು ಕೆಯ್ಯೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷೆ ಶಾಲಿನಿ ರೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಕೆಯ್ಯೂರು ಗ್ರಾ. ಪಂ ಅಧ್ಯಕ್ಷ ಶರತ್ ಕುಮಾರ್ ಮಾಡಾವು ದೀಪ ಬೆಳಗಿಸಿ ಉದ್ಘಾಟಿಸಿ ಪಂಚಾಯತ್ ಮಟ್ಟದಲ್ಲಿ ಸಂಜೀವಿನಿ ಕಾರ್ಯವೈಖರಿ ಬಗ್ಗೆ ಮಾಹಿತಿ ನೀಡಿದರು. ಅತಿಥಿಗಳಾಗಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಯವರು ಸಂಘದ ಸದಸ್ಯರಿಗೆ ಸಂಜೀವಿನಿ ಯೋಜನೆಯ ಮಹತ್ವ, ಸ್ವ ಉದ್ಯೋಗ ದ ಬಗ್ಗೆ ಅರಿವು ಮೂಡಿಸಿದರು. ವಲಯ ಮೇಲ್ವಿಚಾರಕಿ ನಳಿನಾಕ್ಷಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಹಣಕಾಸು ಸಾಕ್ಷರತಾ ಸಂಪನ್ಮೂಲ ವ್ಯಕ್ತಿ ಗೀತಾರವರು ಬ್ಯಾಂಕ್ ಸೌಲಭ್ಯ ಗಳ ಬಗ್ಗೆ ಮಾಹಿತಿ ನೀಡಿದರು. ಪಿಡಿಒ ನಮಿತಾ ಎ.ಕೆಯವರು ಸ್ವಚ್ಛತಾ ಹೀ ಸೇವಾ ಪ್ರತಿಜ್ಞಾ ವಿಧಿ ಭೋದಿಸಿದರು.ವೇದಿಕೆಯಲ್ಲಿ ಪಂಚಾಯತ್ ಉಪಾಧ್ಯಕ್ಷೆ ಸುಮಿತ್ರಾ ಪಲ್ಲತ್ತಡ್ಕ, ಪಂ. ಅ. ಅಧಿಕಾರಿ ನಮಿತಾ ಎ. ಕೆ, ಪಂ. ಕಾರ್ಯದರ್ಶಿ ಸುರೇಂದ್ರ ರೈ,ಬಿಆರ್‌ಪಿ ಪಿಆರ್‌ಐ ವಿದ್ಯಾಶ್ರೀ, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಒಕ್ಕೂಟದ ವಾರ್ಷಿಕ ವರದಿಯನ್ನು ಮುಖ್ಯ ಪುಸ್ತಕ ಬರಹಗರರಾದ ಯಶಸ್ವಿ ಬಿ.ಎಚ್.ರವರು ಮಂಡಿಸಿ ಅನುಮೋದನೆ ಪಡೆದರು. ಲೆಕ್ಕ ಪರಿಶೋಧನೆಯನ್ನು ಒಕ್ಕೂಟದ ಕಾರ್ಯದರ್ಶಿ ಉಷಾ ಮಂಡಿಸಿದರು.
ಗ್ರಂಥಪಾಲಕಿ ಅನುಷಾ ಕಾರ್ಯಕ್ರಮ ನಿರೂಪಿಸಿದರು. ಸಂಘದ ಸದಸ್ಯೆ ಲಲಿತಾ ವಂದಿಸಿದರು. ಒಟ್ಟು 6 ಸಂಘಗಳಿಗೆ ಉತ್ತಮ ಸಂಘ ಪ್ರಶಸ್ತಿ, ಹೈನುಗಾರಿಕೆ ಮತ್ತು ಕೋಳಿಸಾಕಾಣಿಕೆಯಲ್ಲಿ ಸ್ವ ಉದ್ಯೋಗ ಮಾಡುವುದರಲ್ಲಿ, ಸದಸ್ಯರ ಮಕ್ಕಳಿಗೆ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಹೆಚ್ಚುಅಂಕ ಗಳಿಸಿದವರಿಗೆ, ಪ್ರತಿಭಾನ್ವಿತ ವಿದ್ಯಾರ್ಥಿ ಪ್ರಶಸ್ತಿಯನ್ನು ನೀಡಲಾಯಿತು. ಸದಸ್ಯರಿಗೆ ಮತ್ತು ಸಿಬ್ಬಂದಿಗಳಿಗೆ ಆಟೋಟ ಸ್ಪರ್ಧೆ ಏರ್ಪಡಿಸಲಾಯಿತು. ಸಂಜೀವಿನಿ ಸಂತೆ ನಡೆಸಲಾಯಿತು. 100ಕ್ಕಿಂತ ಹೆಚ್ಚು ಸದಸ್ಯರು ಭಾಗವಹಿಸಿದ್ದರು.