ರಾಜ್ಯಮಟ್ಟದ ದಸರಾ ಕ್ರೀಡಾಕೂಟ: ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

0

ಪುತ್ತೂರು: ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಸೆ.22 ರಿಂದ 25ರ ವರೆಗೆ ನಡೆದ ರಾಜ್ಯಮಟ್ಟದ ದಸರಾ ಕ್ರೀಡಾಕೂಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿ ಇಲ್ಲಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಮಹಿಳೆಯರ ವಿಭಾಗದಲ್ಲಿ ಕಾಲೇಜಿನ ಅನನ್ಯ ಹಾಗೂ ನಿಶ್ಮಿತಾ ಇವರು ಚಿನ್ನದ ಪದಕವನ್ನು ಹಾಗೂ ಪುರುಷರು ವಿಭಾಗದಲ್ಲಿ ನಿಜಾಮುದ್ದೀನ್ ಹಾಗೂ ಮನ್ವಿತ್ ಇವರು ಬೆಳ್ಳಿಯ ಪದಕವನ್ನು ಪಡೆದುಕೊಂಡಿರುತ್ತಾರೆ. ಈ ಹಿಂದೆ ಜಿಲ್ಲಾ ಮಟ್ಟದ ಹಾಗೂ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಚಿನ್ನದ ಪದಕವನ್ನು ಪಡೆದಿದ್ದ ಇವರು ರಾಜ್ಯಮಟ್ಟದ ದಸರಾ ಕ್ರೀಡಾಕೂಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ್ದರು. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷ ಚಂದ್ರಹಾಸ ಶೆಟ್ಟಿ , ಸಿಡಿಸಿ ಸದಸ್ಯರು ಹಾಗೂ ಪ್ರಾಂಶುಪಾಲ ರವಿರಾಜ್ ಹಾಗೂ ಉಪನ್ಯಾಸಕರು ಅಭಿನಂದನೆ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here