ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ|ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ-ಆಮಂತ್ರಣ ಪತ್ರಿಕೆ ಬಿಡುಗಡೆ

0

ಪುತ್ತೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೊಳಪಟ್ಟ ಸಮಾಜ ಬಾಂಧವರಿಗಾಗಿ ಅವಿಭಜಿತ ಪುತ್ತೂರು ತಾಲೂಕು ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ನವೆಂಬರ್ 23 ರಂದು ಕೊಂಬೆಟ್ಟು ಜ್ಯೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ಜರಗಲಿದ್ದು, ಈ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಅ.8 ರಂದು ಬ್ರಹ್ಮಶ್ರೀ ನಾರಾಯಣ ಗುರುಮಂದಿರದಲ್ಲಿ ನೆರವೇರಿತು.

ಅರ್ಚಕರಾದ ನವೀನ್ ಶಾಂತಿರವರು ಪೂಜಾವಿಧಿಗಳನ್ನು ನೆರವೇರಿಸಿ ಬಳಿಕ ಕ್ರೀಡಾಕೂಟದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷ ಅಣ್ಣಿ ಪೂಜಾರಿ, ಪ್ರಧಾನ ಕಾರ್ಯದರ್ಶಿ ಶರತ್ ಸಾಲ್ಯಾನ್ ದೋಳ, ಕ್ರೀಡಾ ನಿರ್ದೇಶಕ ಗೌತಮ್ ಪಿ, ಯುವವಾಹಿನಿ ಪುತ್ತೂರು ಘಟಕದ ಮಾಜಿ ಅಧ್ಯಕ್ಷರಾದ ಹೊನ್ನಪ್ಪ ಪೂಜಾರಿ ಕೈಂದಾಡಿ, ಜಯಂತ್ ಬಾಯಾರು, ಬಾಬು ಪೂಜಾರಿ ಇದ್ಪಾಡಿ, ನಾರಾಯಣ ಪೂಜಾರಿ ಕುರಿಕ್ಕಾರ, ಜಯರಾಮ ಬಿ.ಎನ್, ಬಿಲ್ಲವ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾವತಿ ಕೇಕುಡೆ, ನಾರಾಯಣ ಗುರುಮಂದಿರದ ಸಂಚಾಲಕ ಅಶೋಕ್ ಪೂಜಾರಿ ಪಡ್ಪು, ಸದಸ್ಯೆ ವಿಮಲ ಸುರೇಶ್, ಮಾ|ಯಶ್ವಿನ್ ಉಪಸ್ಥಿತರಿದ್ದರು.

ಸ್ಪರ್ಧೆಯ ವಿವರಗಳು..
ಪುರುಷರಿಗೆ:ಕ್ರಿಕೆಟ್ (ಓವರ್ ಆರ್ಮ್),ಹಗ್ಗಜಗ್ಗಾಟ, ವಾಲಿಬಾಲ್
ಮಹಿಳೆಯರಿಗೆ: ತ್ರೋಬಾಲ್, ಹಗ್ಗ ಜಗ್ಗಾಟ
ಮಕ್ಕಳಿಗೆ: ಎಲ್.ಕೆ.ಜಿಯಿಂದ 7ನೇ ತರಗತಿಯವರೆಗಿನ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು

LEAVE A REPLY

Please enter your comment!
Please enter your name here