ಕೆಎಸ್‌ಆರ್‌ಟಿಸಿ ಪುತ್ತೂರು ಘಟಕದಲ್ಲಿ ಆಯುಧ ಪೂಜೆ: ಸಂಸ್ಥೆಯ ಸಿಬ್ಬಂದಿಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ- ಸನ್ಮಾನ

0

ಪುತ್ತೂರು: ಕೆಎಸ್‌ಆರ್‌ಟಿಸಿ ಪುತ್ತೂರು ಘಟಕದಲ್ಲಿ ಆಯುಧ ಪೂಜೆಯು ಇತ್ತೀಚೆಗೆ ಶ್ರದ್ಧಾ ಭಕ್ತಿಯಿಂದ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಬ್ಬಂದಿಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.


ಕೆಎಸ್‌ಆರ್‌ಟಿಸಿ ಪುತ್ತೂರು ಘಟಕದ ವ್ಯವಸ್ಥಾಪಕ ಸುಬ್ರಹ್ಮಣ್ಯಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಸ್ಥೆಯ ವಿಭಾಗೀಯ ಯಾಂತ್ರಿಕ ಅಭಿಯಂತರ ವೆಂಕಟೇಶ್, ವಿಭಾಗೀಯ ಅಧೀಕ್ಷಕ ಎಟಿಸಿ ಈಶ್ವರ, ಲೆಕ್ಕಪತ್ರ ಮೇಲ್ವಿಚಾರಕ ಪೂರ್ಣೇಶ್, ಲೋಕೇಶ್ವರ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಪ್ರತಿಭಾ ಪುರಸ್ಕಾರ, ಸನ್ಮಾನ:
ಸಿಬ್ಬಂದಿಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಬಳಿಕ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ವೆಂಕಟ್ರಮಣ ಭಟ್ ಮತ್ತು ಮಂಜಪ್ಪ ಗೌಡ ಅವರನ್ನು ಸನ್ಮಾನಿಸಲಾಯಿತು. ವಿಶೇಷ ಕಾರ್ಯನಿರ್ವಹಿಸಿದ ತಾಂತ್ರಿಕ ಸಿಬ್ಬಂದಿಗಳಾದ ರಾಧಾಕೃಷ್ಣ, ಸಿಜು ಕೆ, ಸದಾಶಿವ ಹಾಗು ದಾನಿಗಳನ್ನು ಗೌರವಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಬೀರಮಲೆಯಲ್ಲಿರುವ ಪ್ರಜ್ಞಾ ಆಶ್ರಮಕ್ಕೆ ಬೆಳಗ್ಗಿನ ಉಪಹಾರ ಮತ್ತು ಮಧ್ಯಾಹ್ನ ಹಾಗು ರಾತ್ರಿಯ ಊಟದ ವ್ಯವಸ್ಥೆಯನ್ನು ಸಂಸ್ಥೆಯಿಂದ ಮಾಡಲಾಗಿತ್ತು.

LEAVE A REPLY

Please enter your comment!
Please enter your name here