ಪಡುಬೆಟ್ಟು ಒಕ್ಕೂಟದ ವಾರ್ಷಿಕೋತ್ಸವ

0

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ ತಾಲೂಕು ನೆಲ್ಯಾಡಿ ವಲಯ ಪಡುಬೆಟ್ಟು ಒಕ್ಕೂಟದ ವಾರ್ಷಿಕೋತ್ಸವ ಪಡುಬೆಟ್ಟು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು.


ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯದ ಅಧ್ಯಕ್ಷರಾದ ಜಯಾನಂದ ಬಂಟ್ರಿಯಾಲ್ ಉದ್ಘಾಟಿಸಿ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆ ನಡೆದು ಬಂದ ರೀತಿಯ ಬಗ್ಗೆ ತಿಳಿಸಿ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಪಡುಬೆಟ್ಟು ಒಕ್ಕೂಟದ ಅಧ್ಯಕ್ಷರಾದ ಜಾನ್ ಮೊಂತೇರೋ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಆಗಮಿಸಿದ ಶ್ರೀ ಕ್ಷೇ. ಧ. ಗ್ರಾ. ಯೋಜನೆ ಕಡಬ ತಾಲೂಕಿನ ಯೋಜನಾಧಿಕಾರಿ ಪ್ರಕಾಶ್ ಕುಮಾರ್‌ರವರು ಮಾತನಾಡಿ, ಮನೆಯಲ್ಲಾಗಲಿ ಸಂಘದಲ್ಲಾಗಲಿ ಸಣ್ಣಪುಟ್ಟ ವಿಚಾರಗಳ ಬಗ್ಗೆ ಮನಸ್ತಾಪವನ್ನು ಮಾಡದೆ ಅದನ್ನು ವಿಮರ್ಶೆ ಮಾಡಿಕೊಂಡು ಬಗೆಹರಿಸಿಕೊಳ್ಳಬೇಕೆಂದು ಹೇಳಿದರು.


ಕೇಂದ್ರ ಒಕ್ಕೂಟ ಅಧ್ಯಕ್ಷರಾದ ಸಂತೋಷ್ ಕೇನ್ಯ, ಮಾಜಿ ಅಧ್ಯಕ್ಷ ಬಾಲಕೃಷ್ಣ ಗೌಡ ಹಾರ್ಪಳ, ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಸಲಾಂ ಬಿಲಾಲ್, ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆ ನೆಲ್ಯಾಡಿ ವಲಯದ ಅಧ್ಯಕ್ಷರಾದ ಕುಶಾಲಪ್ಪ ಗೌಡ ಪಿ.ಎನ್., ಹಾರ್ಪಳ ಶ್ರೀ ಶಾಸ್ತರೇಶ್ವರ ದೇವಸ್ಥಾನದ ಅಧ್ಯಕ್ಷರಾದ ಸುಂದರ ಗೌಡ ಅತ್ರಿಜಾಲ ಶುಭ ಹಾರೈಸಿದರು. ವಲಯ ಮೇಲ್ವಿಚಾರಕ ಆನಂದ ಬಿ ಸ್ವಾಗತಿಸಿದರು. ರಜನಿ ನಿರೂಪಿಸಿ, ಸೇವಾ ಪ್ರತಿನಿಧಿ ಮೋಹಿನಿ ವಂದಿಸಿದರು. ಕಾರ್ಯಕ್ರಮದ ಆರಂಭದಲ್ಲಿ ಶ್ರೀ ಶಾಸ್ತಾರೇಶ್ವರ ಭಜನಾ ತಂಡದಿಂದ ಭಜನಾ ಕಾರ್ಯಕ್ರಮ ನಡೆಯಿತು.

ಸಭಾ ಕಾರ್ಯಕ್ರಮದ ನಂತರ ತಂಡದ ಸದಸ್ಯರಿಂದ ವಿವಿಧ ಮನೋರಂಜನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here