ವಿಶೇಷ ಮಧ್ಯಸ್ಥಿಕೆ ಅಭಿಯಾನದಲ್ಲಿ5,524 ಪ್ರಕರಣಗಳು ಇತ್ಯರ್ಥ

0

ಮಂಗಳೂರು: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಽಕಾರವು, ಮಧ್ಯಸ್ಥಿಕೆ ಮತ್ತು ಸಂಧಾನ ಯೋಜನಾ ಸಮಿತಿ(ಎಂಸಿಪಿಸಿ), ಭಾರತದ ಸರ್ವೋಚ್ಚ ನ್ಯಾಯಾಲಯದೊಂದಿಗೆ, ವಿಶೇಷ ಮಧ್ಯಸ್ಥಿಕೆ ಅಭಿಯಾನವನ್ನು ಜು.1ರಿಂದ ಅ.6ರವರೆಗೆ ಎಲ್ಲಾ ಉಚ್ಚ ನ್ಯಾಯಾಲಯ, ಜಿಲ್ಲಾ ನ್ಯಾಯಾಲಯಗಳು ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ನಡೆಸಲಾಗಿದೆ. ಇದು ಬಾಕಿ ಇರುವ ಪ್ರಕರಣಗಳನ್ನು ಮಧ್ಯಸ್ಥಿಕೆಯ ಮೂಲಕ ಇತ್ಯರ್ಥಪಡಿಸಲು 90 ದಿನಗಳ ಅಭಿಯಾನವಾಗಿತ್ತು.


ಕರ್ನಾಟಕ ರಾಜ್ಯದಲ್ಲಿ 01 ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ ಮತ್ತು 28 ಜಿಲ್ಲಾ ಮಧ್ಯಸ್ಥಿಕೆ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಕರ್ನಾಟಕ ಮಧ್ಯಸ್ಥಿಕೆ ಕೇಂದ್ರವು, ಕರ್ನಾಟಕ ಉಚ್ಚ ನ್ಯಾಯಾಲಯ,ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ನಗರ ವ್ಯಾಪ್ತಿಯೊಳಗಿನ ನ್ಯಾಯಾಲಯಗಳ ಪ್ರಕರಣಗಳ ಮಧ್ಯಸ್ಥಿಕೆ ಪ್ರಕ್ರಿಯೆಯ ಮೇಲ್ವಿಚಾರಣೆ ಮಾಡುತ್ತದೆ. ಉಳಿದ 28 ಜಿಲ್ಲಾ ಮಧ್ಯಸ್ಥಿಕೆ ಕೇಂದ್ರಗಳನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಮೂಲಕ ನಿರ್ವಹಿಸಲಾಗುತ್ತಿದೆ. ಜಿಲ್ಲಾ ಮತ್ತು ತಾಲ್ಲೂಕು ವಕೀಲರ ಸಂಘಗಳ ಅಧ್ಯಕ್ಷರು/ಪದಾಧಿಕಾರಿಗಳು ಮತ್ತು ಜಿಲ್ಲಾ ಮತ್ತು ತಾಲ್ಲೂಕು ನ್ಯಾಯಾಲಯಗಳ ಪಟ್ಟಿಯಲ್ಲಿರುವ ಮಧ್ಯಸ್ಥಿಕೆದಾರರೆಲ್ಲರೂ ಮಧ್ಯಸ್ಥಿಕೆ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ರಾಜ್ಯದ ಎಲ್ಲಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಮಧ್ಯಸ್ಥಿಕೆ ಕೇಂದ್ರಗಳ ಸಹ-ಸಂಯೋಜಕರಾಗಿದ್ದು, ಈ ವಿಶೇಷ ಅಭಿಯಾನದ ಯಶಸ್ಸಿಗಾಗಿ ಆಯಾ ನ್ಯಾಯಾಂಗ ಅಧಿಕಾರಿಗಳು, ಮಧ್ಯಸ್ಥಿಕೆಗಾರರು ಮತ್ತು ಇತರ ಪಾಲುದಾರರನ್ನು ಪ್ರೇರೇಪಿಸಲು ಒಟ್ಟು 686 ಸಭೆಗಳನ್ನು ನಡೆಸಿದ್ದಾರೆ.


ಜುಲೈ 1ರಂತೆ, ಕರ್ನಾಟಕ ಉಚ್ಚ ನ್ಯಾಯಾಲಯ ಮತ್ತು ಜಿಲ್ಲಾ ನ್ಯಾಯಾಲಯಗಳ ಮುಂದೆ 13,86,837 ಪ್ರಕರಣಗಳು ಬಾಕಿ ಇದ್ದವು. ಈ ಪ್ರಕರಣಗಳಲ್ಲಿ 76,197 ಪ್ರಕರಣಗಳನ್ನು ಗುರುತಿಸಿ ಮಧ್ಯಸ್ಥಿಕೆ ಕೇಂದ್ರಗಳಿಗೆ ಕಳುಹಿಸಲಾಯಿತು,ಅದರಲ್ಲಿ 46,676 ಪ್ರಕರಣಗಳನ್ನು ಮಧ್ಯಸ್ಥಿಕೆಗೆ ತೆಗೆದುಕೊಂಡಿದ್ದು, 5,524 ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.


90 ದಿನಗಳ ರಾಷ್ಟ್ರಕ್ಕಾಗಿ ವಿಶೇಷ ಅಭಿಯಾನ ಮಧ್ಯಸ್ಥಿಕೆಯ ಮುಖ್ಯಾಂಶಗಳು
ವೈವಾಹಿಕ ಪ್ರಕರಣಗಳು ಮತ್ತು ಕೌಟುಂಬಿಕ ದೌರ್ಜನ್ಯ ಪ್ರಕರಣಗಳು-ದಂಡ ಪ್ರಕ್ರಿಯಾ ಸಂಹಿತೆ ಕಲಂ 125 ಮತ್ತು ಕೌಟುಂಬಿಕ ಹಿಂಸಾಚಾರ ಕಾಯ್ದೆ ಅಡಿಯಲ್ಲಿನ ಪ್ರಕರಣಗಳು ಸೇರಿದಂತೆ ಒಟ್ಟು 3,038 (2862+176) ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು. ಪಾಲು ವಿಭಾಗ ದಾವೆಗಳು: ಒಟ್ಟು 649 ಪಾಲು ವಿಭಾಗ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ.


ಅಪಘಾತ ಪರಿಹಾರ ಪ್ರಕರಣಗಳು
ವಿಶೇಷ ಅಭಿಯಾನದಲ್ಲಿ ಒಟ್ಟು 104 ಎಂ.ವಿ.ಸಿ. ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. 668 ಚೆಕ್ ಬೌನ್ಸ್ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. 21 ವಾಣಿಜ್ಯ ವಿವಾದ ಪ್ರಕರಣಗಳ ವಿಲೇವಾರಿ ಮಾಡಲಾಗಿದೆ. 188 ಕ್ರಿಮಿನಲ್ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. 40 ಡಿ.ಆರ್.ಟಿ. ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ಒಟ್ಟು 8 ಗ್ರಾಹಕ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ವಿಶೇಷ ಅಭಿಯಾನದ ಮಧ್ಯಸ್ಥಿಕ ಕಾರ್ಯಾಚರಣೆ ಹಳೆಯ ಪ್ರಕರಣಗಳ ಇತ್ಯರ್ಥ. 5 ವರ್ಷಗಳು ಮತ್ತು ಮೇಲ್ಪಟ್ಟು- 177,10 ವರ್ಷಗಳು ಮತ್ತು ಮೇಲ್ಪಟ್ಟು- 15 ವರ್ಷಗಳು ಮತ್ತು ಮೇಲ್ಪಟ್ಟು -6.163 ಪ್ರಕರಣಗಳಲ್ಲಿ, ಹಿರಿಯ ನಾಗರಿಕರು ಈ ವಿಶೇಷ ಅಭಿಯಾನದ ಮಧ್ಯಸ್ಥಿಕೆ ಕಾರ್ಯಾಚರಣೆಯಿಂದ ಪ್ರಯೋಜನ ಪಡೆದಿದ್ದಾರೆ.


ರಾಜ್ಯದ ವಿವಿಧ ಸ್ಥಳಗಳಿಂದ ಒಟ್ಟು 159 ದಂಪತಿಗಳು ವಿಶೇಷ ಅಭಿಯಾನದ ಮಧ್ಯಸ್ಥಿಕ ಕಾರ್ಯಾಚರಣೆಯಲ್ಲಿ ಸಂಧಾನದ ಕಾರಣದಿಂದ ಪುನರ್ಮಿಲನಗೊಂಡರು. ವಿಶೇಷ ಮಧ್ಯಸ್ಥಿಕೆ ಅಭಿಯಾನದಲ್ಲಿ ದಾಖಲೆಯ ಸಂಖ್ಯೆಯ ಪ್ರಕರಣಗಳನ್ನು ವಿಲೇವಾರಿ ಮಾಡಿದ್ದಕ್ಕಾಗಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಸೇವಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here