ಪುತ್ತೂರು: ಪುತ್ತೂರಿನ ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಮೊನ್ಸಿಜ್ಞೊರ್ ಆಂಟನಿ ಪತ್ರಾವೋರವರ ಸ್ಮರಣಾರ್ಥ ನಡೆಯುವ ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ ಕಾರ್ಯಕ್ರಮ ಅ.10 ಮತ್ತು 11ರಂದು ಸಂತ ಫಿಲೋಮಿನಾ ಕಾಲೇಜು ಮೈದಾನದಲ್ಲಿ ನಡೆಯಲಿದೆ.
ಉದ್ಘಾಟನಾ ಸಮಾರಂಭ:
ಅ.10ರಂದು ಬೆಳಿಗ್ಗೆ 9.15ಕ್ಕೆ ಕ್ರಿಡಾಕೂಟದ ಉದ್ಘಾಟನೆ ನಡೆಯಲಿದ್ದು ಮಂಗಳೂರು ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಶನ್ ಉಪಾಧ್ಯಕ್ಷರಾದ ಮೊನ್ಸಿಜ್ಞೊರ್ ಮ್ಯಾಕ್ಸಿಮ್ ಲಾರೆನ್ಸ್ ನೋರೊನ್ಹಾ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ, ಮಂಗಳೂರು ಸಿಟಿ ಕ್ರೈಮ್ ಬ್ರ್ಯಾಂಚ್ ಪೊಲೀಸ್ ಇನ್‌ಸ್ಪೆಕ್ಟರ್ ರಫೀಕ್ ಕೆ.ಎಮ್. ಭಾಗವಹಿಸಲಿದ್ದಾರೆ. ಮಾಯ್ ದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂ|ಲಾರೆನ್ಸ್ ಮಸ್ಕರೇನಸ್, ಮಾಯ್ ದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಜೆರಾಲ್ಡ್ ಡಿಕೋಸ್ಟ, ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು ಪ್ರಾಂಶುಪಾಲರಾದ ವಂ|ಡಾ|ಆಂಟನಿ ಪ್ರಕಾಶ್ ಮೊಂತೆರೊ, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ವಂ|ಅಶೋಕ್ ರಾಯನ್ ಕ್ರಾಸ್ತಾ, ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲಾ ಮುಖ್ಯಶಿಕ್ಷಕರಾದ ವಂ|ಮ್ಯಾಕ್ಸಿಮ್ ಡಿಸೋಜ ಎಮ್., ಸಂತ ವಿಕ್ಟರನ ಬಾಲಿಕ ಪ್ರೌಢಶಾಲೆಯ ಮುಖ್ಯಶಿಕ್ಷಕಿ ರೊಸಲಿನ್ ಲೋಬೊ, ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕಿ ಸಿಸ್ಟರ್ ಲೋರಾ ಪಾಯಸ್, ಸಂತ ವಿಕ್ಟರನ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕರಾದ ಹ್ಯಾರಿ ಡಿಸೋಜ, ಮಾಯ್ ದೆ ದೇವುಸ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಜಾನೆಟ್ ಡಿಸೋಜ, ಸಂತ ಫಿಲೋಮಿನಾ ಮಹಿಳೆಯರ ಹಾಸ್ಟೆಲ್ ವಾರ್ಡನ್ ಸಿಸ್ಟರ್ ಲೂರ್ದು ಮೇರಿ ಗೌರವ ಉಪಸ್ಥಿತರಿರಲಿದ್ದಾರೆ.
ಸಮಾರೋಪ ಸಮಾರಂಭ:
ಅ.11ರಂದು ಸಂಜೆ 3.30ರಿಂದ ಸಮಾರೋಪ ಸಮಾರಂಭ ನಡೆಯಲಿದ್ದು ಮಾಯ್ ದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ|ಲಾರೆನ್ಸ್ ಮಸ್ಕರೇನಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾದ ಸ್ಟೆಲ್ಲಾ ವರ್ಗೀಸ್ ಮತ್ತು ಪುತ್ತೂರು ಉಪವಿಭಾಗದ ಅಬಕಾರಿ ನಿರೀಕ್ಷಕರಾದ ಜೋಸ್ಲಿನ್ ಜೆ. ಫೆರ್ನಾಂಡಿಸ್ ಭಾಗವಹಿಸಲಿದ್ದಾರೆ ಎಂದು ಶಿಕ್ಷಣ ಸಂಸ್ಥೆಗಳ ಸಂಚಾಲಕರು, ಆಡಳಿತ ಮಂಡಳಿ, ಶಾಲಾ ಕಾಲೇಜು ಮುಖ್ಯಸ್ಥರು, ರಕ್ಷಕ-ಶಿಕ್ಷಕ ಸಂಘ, ಹಿರಿಯ ವಿದ್ಯಾರ್ಥಿ ಸಂಘ, ಬೋಧಕ-ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿ ಬಳಗದ ಪ್ರಕಟಣೆ ತಿಳಿಸಿದೆ.