ಪುತ್ತೂರು: ಪುತ್ತೂರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ಬೆಂಗಳೂರಿನ ಚೆನ್ನೇನಹಳ್ಳಿಯ ಜನ ಸೇವಾ ವಿದ್ಯಾ ಕೇಂದ್ರದಲ್ಲಿ ನಡೆದ ವಿದ್ಯಾಭಾರತಿ ದಕ್ಷಿಣ ಕ್ಷೇತ್ರ ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದ್ದಾರೆ.
ಪುತ್ತೂರು ಕುಕ್ಕಾಡಿ ನಿವಾಸಿಗಳಾದ ಸಂತೋಷ್ ಕುಮಾರ್ ಹಾಗೂ ಡಾ. ರವಿಕಲಾ ಸಂತೋಷ್ ಇವರ ಪುತ್ರಿ, 10ನೇ ತರಗತಿಯ ವಿದ್ಯಾರ್ಥಿನಿ ಲಾಸ್ಯ ಸಂತೋಷ್ ಚಕ್ರ ಎಸೆತದಲ್ಲಿ ಮೊದಲನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ನೆಲ್ಲಿಕಟ್ಟೆ ಪುತ್ತೂರು ನಿವಾಸಿಗಳಾದ ದಿ. ಜನಾರ್ದನ ಗೌಡ ಮತ್ತು ಶಾರದಾ ದಂಪತಿ ಪುತ್ರಿ, 9ನೇ ತರಗತಿಯ ಬಿ.ತ್ರಿಷಾ 400 ಮೀ ಅಡೆತಡೆ ಓಟದಲ್ಲಿ(ಹರ್ಲ್ಡಲ್ಸ್) ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈ ಇಬ್ಬರೂ ವಿದ್ಯಾರ್ಥಿನಿಯರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇದಕ್ಕೂ ಪೂರ್ವದಲ್ಲಿ ಜನ ಸೇವಾ ವಿದ್ಯಾ ಕೇಂದ್ರದಲ್ಲಿ ನಡೆದಿದ್ದ ರಾಜ್ಯಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಮಹೇಶ್ ಶೆಟ್ಟಿ ಮತ್ತು ಸುಕನ್ಯಾ ಕೆ ಶೆಟ್ಟಿ ದಂಪತಿ ಪುತ್ರ, ಏಳನೇ ತರಗತಿಯ ವಿದ್ಯಾರ್ಥಿ ದೀಪಾಂಶ್ ಶೆಟ್ಟಿ 600ಮೀ ಓಟದಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ನಮ್ಮ ಶಾಲೆಯ ದೈಹಿಕ ಶಿಕ್ಷಣ – ಶಿಕ್ಷಕರು ಸಂತೋಷ್ ಹಾಗೂ ಸುಚಿತ್ರ ಇವರು ತರಬೇತಿ ಹಾಗೂ ಮಾರ್ಗದರ್ಶನವನ್ನು ನೀಡಿರುತ್ತಾರೆ.