ಪುತ್ತೂರು: ಸುದಾನ ವಸತಿ ಶಾಲೆಯಲ್ಲಿ ಒಂಭತ್ತು ಮತ್ತು ಹತ್ತನೇ ತರಗತಿಯ ವಿದ್ಯಾರ್ಥಿಗಳಿಗಾಗಿ ’ ನಶೆ ಮುಕ್ತತೆ, ಮೊಬೈಲ್ ಗೀಳು, ಪೋಕ್ಸೊ ಕಾಯ್ದೆ ಜಾಗೃತಿ ಕಾರ್ಯಕ್ರಮ ಅ.2ರಂದು ನಡೆಯಿತು.
ಪುತ್ತೂರಿನ ಆರಕ್ಷಕ ಠಾಣೆಯ ಸಹಯೋಗದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಪೋಲಿಸ್ ಅಧಿಕಾರಿ ಆಂಜನೇಯ ರೆಡ್ಡಿಯವರು ಪೋಕ್ಸೊ ಕಾಯ್ದೆ, ಗಂಡು ಮತ್ತು ಹೆಣ್ಣು ಮಕ್ಕಳ ಸುರಕ್ಷಿತತೆ, ತೆಗೆದುಕೊಳ್ಳಬೇಕಾದ ಮುಂಜಾಗ್ರತೆಗಳ ಬಗೆಗೆ ತಿಳಿಸಿದರು.

ಶಾಲೆಯ ಮುಖ್ಯ ಶಿಕ್ಷಕಿ ಶೋಭಾ ನಾಗರಾಜ್ ಮಕ್ಕಳಿಗೆ ಕಾನೂನಿನ ಅರಿವು ಅತ್ಯಗತ್ಯ. ಪೋಕ್ಸೊ ಕಾಯ್ದೆಯು ಅಪ್ರಾಪ್ತ ಮಕ್ಕಳಿಗೆ ರಕ್ಷಣೆಯನ್ನು ನೀಡುತ್ತದೆ ಎಂದು ಅಭಿಪ್ರಾಯಪಟ್ಟರು. ಶಾಲಾ ಆಡಳಿತಾಧಿಕಾರಿ ಸುಶಾಂತ್ ಹಾರ್ವಿನ್, ಕೋಶಾಧಿಕಾರಿ ಆಸ್ಕರ್ ಆನಂದ್ ಪೋಲಿಸ್ ಕಾನ್‌ಸ್ಟೇಬಲ್‌ಗಳಾದ ಅಕ್ಷಯ್ , ವಿರೂಪಾಕ್ಷ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಹ ಶಿಕ್ಷಕಿ ಯೋಗಿತಾ ಎ ಕಾರ್ಯಕ್ರಮವನ್ನು ನಿರ್ವಹಿಸಿದರು. ಸುದಾನ ಶಾಲೆಯ ಜಾಗೃತಿ ಸೋಶಿಯಲ್ ಕ್ಲಬ್ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.