ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂಬ್ರ ಸರಕಾರಿ ಪ್ರೌಢ ಶಾಲೆ ಹಾಗೂ ಗ್ರಾಮ ಪಂಚಾಯತ್ ಕಛೇರಿಯಲ್ಲಿ ಒಂದು ವರ್ಷಗಳ ಹಿಂದೆ ಕಳ್ಳತನವಾಗಿದ್ದು ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಕಳ್ಳರನ್ನು ಪತ್ತೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಆದರೆ ಇದುವರೆಗೆ ಯಾವುದೇ ಬೆಳವಣಿಗೆ ಆಗದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಗ್ರಾಮಸಭೆಯಲ್ಲಿ ಆಗ್ರಹಿಸಿದಂತೆ ತನಿಖೆಯನ್ನು ಚುರುಕುಗೊಳಿಸುವಂತೆ ಎಸ್.ಪಿಯವರಿಗೆ ಗ್ರಾ.ಪಂ.ನಿಂದ ಮನವಿಯನ್ನು ಸಲ್ಲಿಸಲಾಯಿತು.
ಗ್ರಾ.ಪಂ ಕಛೇರಿ ಸೇರಿದಂತೆ ಕುಂಬ್ರ ಸರಕಾರಿ ಪ್ರೌಢ ಶಾಲೆಯಲ್ಲಿಯೂ ಕಳ್ಳತನವಾಗಿದ್ದು ಈ ಬಗ್ಗೆಯೂ ಪೊಲೀಸ್ ಇಲಾಖೆಯಿಂದ ತನಿಖೆ ನಡೆಯುತ್ತಾ ಇದೆ. ಆದರೆ ಈ ತನಕ ಕಳ್ಳರನ್ನು ಪತ್ತೆ ಹಚ್ಚುವರೇ ಅಸಾಧ್ಯವಾಗಿರುವುದರಿಂದ ಈ ಬಗ್ಗೆ ತನಿಖೆಯನ್ನು ಚುರುಕುಗೊಳಿಸುವಂತೆ ಒಳಮೊಗ್ರು ಗ್ರಾಮಸಭೆಯಲ್ಲಿ ಗ್ರಾಮಸ್ಥರು ಆಗ್ರಹಿಸಿದ್ದರು. ಗ್ರಾಮಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ನಿರ್ಣಯ ಪ್ರತಿಯೊಂದಿಗೆ ಮುಂದಿನ ಕ್ರಮಕ್ಕಾಗಿ ಎಸ್.ಪಿಯವರಿಗೆ ಮನವಿಯನ್ನು ಸಲ್ಲಿಸಲಾಗಿದ್ದು ಶೀಘ್ರವಾಗಿ ಕಳ್ಳರನ್ನು ಪತ್ತೆ ಹಚ್ಚುವಂತೆ ವಿನಂತಿಸಿಕೊಳ್ಳಲಾಗಿದೆ. ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಗ್ರಹದಂತೆ ಕೈಗೊಂಡ ನಿರ್ಣಯದನ್ವಯ ಜಿಲ್ಲಾ ಸೂಪರಿಟೆಂಡಂಟ್ ಆಫ್ ಪೊಲೀಸ್ರವರಿಗೆ ಗ್ರಾಪಂನಿಂದ ಮನವಿ ಮಾಡಿದ್ದೇವೆ ಎಂದು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ತಿಳಿಸಿದ್ದಾರೆ.