ಪುತ್ತೂರು: ಪುತ್ತೂರು ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಅಂಗನವಡಿ ಕಾರ್ಯಕರ್ತೆ-2 ಹಾಗೂ ಸಹಾಯಕಿ-37 ಹುದ್ದೆ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು ಅರ್ಜಿ ಸಲ್ಲಿಕೆಗೆ ಅ.20ರವರೆಗೆ ದಿನಾಂಕ ವಿಸ್ತರಿಸಲಾಗಿದೆ.
ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸುವಾಗ ನೀಡಿರುವ ಅರ್ಜಿ ಸಂಖ್ಯೆಯನ್ನು ಇಲಾಖೆಯ ವೆಬ್‌ಸೈಟ್ https://karnemakaone.kar.nic.in/abcd/ ದಲ್ಲಿ ನಮೂದಿಸಿ ಮತ್ತೊಮ್ಮೆ ಪರಿಶೀಲಿಸಿ ಅರ್ಜಿ ಸಲ್ಲಿಕೆಯ ಹಂತಗಳು ಪೂರ್ಣಗೊಂಡಿರದಿದ್ದಲ್ಲಿ ಪೂರ್ಣಗೊಳಿಸಬೇಕು.ಹೆಚ್ಚಿನ ಮಾಹಿತಿಗಾಗಿ ಪುತ್ತೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ದೂರವಾಣಿ ಸಂಖ್ಯೆ-08251298788 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.