ಅನ್ನಭಾಗ್ಯ: 5 ಕೆಜಿ ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ

0

ಬಡವರಿಗೆ ನೆಮ್ಮದಿಯ ಬದುಕು- ಶಾಸಕ ಅಶೋಕ್‌ ರೈ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡುದಾರರಿಗೆ ನೀಡುತ್ತಿರುವ 10 ಕೆಜಿ ಅಕ್ಕಿಯಲ್ಲಿ ಐದು ಕೆ.ಜಿ ಅಕ್ಕಿ ಬದಲಾಗಿ ‘ಇಂದಿರಾ ಆಹಾರ ಕಿಟ್’(ಪೌಷ್ಠಿಕ ಆಹಾರ ಕಿಟ್) ನೀಡಲು ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ.ಬಿಪಿಎಲ್ ಕಾರ್ಡ್‌ದಾರರು ಹಾಗೂ ಅಂತ್ಯೋದಯ ಕಾರ್ಡ್‌ದಾರರಿಗೆ ಅನ್ನಭಾಗ್ಯ ಯೋಜನೆಯಡಿಯಲ್ಲಿ ಇನ್ನು ಮುಂದೆ 5 ಕೆಜಿ ಅಕ್ಕಿ ಹಾಗೂ 61.19 ಕೋಟಿ ರೂ. ವೆಚ್ಚದಲ್ಲಿ ಆಹಾರ ಧಾನ್ಯಗಳ ‘ಇಂದಿರಾ ಆಹಾರ ಕಿಟ್’ ನೀಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ.


ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿಯ ಜೊತೆಗೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿಯನ್ನು ಸೇರಿಸಿ ಒಟ್ಟು 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿದೆ.ಈ ಮುಂಚೆ ಅಕ್ಕಿಯ ಅಭಾವ ಹಿನ್ನೆಲೆ ಫಲಾನುಭವಿಗಳ ಖಾತೆಗೆ 175 ರೂ.ಜಮಾ ಮಾಡಲಾಗುತ್ತಿತ್ತು.ಅಕ್ಕಿಯ ದರ ಇಳಿಕೆ ಆದ ಬಳಿಕ ಕಳೆದ ಕೆಲ ತಿಂಗಳಿನಿಂದ ಮತ್ತೆ ಹಣದ ಬದಲಾಗಿ ಉಚಿತ ಅಕ್ಕಿ ನೀಡಲಾಗುತ್ತಿದೆ.ಇದೀಗ ಅನ್ನ ಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಇಂದಿರಾ ಆಹಾರ ಕಿಟ್ ವಿತರಣೆಗೆ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ.


ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡುದಾರರಿಗೆ ಹೆಚ್ಚುವರಿಯಾಗಿ ನೀಡುತ್ತಿರುವ ಐದು ಕೆ.ಜಿ ಅಕ್ಕಿಯ ಬದಲಾಗಿ 61.19 ಕೋಟಿ ರೂ. ವೆಚ್ಚದಲ್ಲಿ ಇಂದಿರಾ ಆಹಾರ ಕಿಟ್ ನೀಡಲು ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ.ಅನ್ನಭಾಗ್ಯ ಅಕ್ಕಿಯ ಅಕ್ರಮ ಸಾಗಾಟ, ಕಳ್ಳತನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿರಾ ಆಹಾರ ಕಿಟ್ ನೀಡಲು ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದರು.


ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಹೆಚ್ಚುವರಿ ಅಕ್ಕಿ ನೀಡಲು ಆಯವ್ಯಯದಲ್ಲಿ ಹಂಚಿಕೆ ಮಾಡಿರುವ 6,426 ಕೋಟಿ ರೂ. ಅನುದಾನದಲ್ಲಿ 6116.52 ಕೋಟಿ ರೂ.ವೆಚ್ಚದಲ್ಲಿ ಇಂದಿರಾ ಆಹಾರ ಕಿಟ್ ಒದಗಿಸಲು ಬಜೆಟ್ ಮರುಹಂಚಿಕೆ ಮಾಡಲು ಅನುಮೋದನೆ ನೀಡಲಾಗಿದೆ.ಇಂದಿರಾ ಕಿಟ್‌ನಲ್ಲಿ 2 ಕೆ.ಜಿ ತೊಗರಿ ಬೇಳೆ, 1 ಲೀಟರ್ ಅಡುಗೆ ಎಣ್ಣೆ, 1 ಕೆ.ಜಿ ಸಕ್ಕರೆ ಹಾಗೂ 1 ಕೆ.ಜಿ ಉಪ್ಪು ಇರಲಿದೆ ಎಂದು ಸಚಿವರು ತಿಳಿಸಿದರು.


ಒಂದಿಬ್ಬರಿದ್ದರೆ ಅರ್ಧರ್ಧ ಕೆಜಿಯ ಕಿಟ್:
ಕುಟುಂಬದಲ್ಲಿ ಒಬ್ಬರು, ಇಬ್ಬರು ಮಾತ್ರ ಇದ್ದರೆ ಅರ್ಧರ್ಧ ಕೆ.ಜಿ ಇರುವ ಕಿಟ್ ನೀಡಲಾಗುತ್ತದೆ.ಕುಟುಂಬದಲ್ಲಿ ಮೂರು ನಾಲ್ಕು ಮಂದಿ ಸದಸ್ಯರು ಇದ್ದರೆ ಒಂದೊಂದು ಕೆ.ಜಿಯ ಕಿಟ್ ನೀಡಲಾಗುತ್ತದೆ.ಐದಕ್ಕಿಂತ ಹೆಚ್ಚು ಮಂದಿ ಸದಸ್ಯರು ಇದ್ದರೆ ಒಂದೂವರೆ ಕೆ.ಜಿ ಇರುವ ಕಿಟ್ ವಿತರಣೆ ಮಾಡಲಾಗುತ್ತದೆ.ಇದರಿಂದ 4,48,62,192 ಫಲಾನುಭವಿಗಳಿಗೆ ಅನುಕೂಲ ಆಗಲಿದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.

ಇಂದಿರಾ ಕಿಟ್‌ನಲ್ಲಿ ಏನೇನಿದೆ?
ಕರ್ನಾಟಕ ಸರಕಾರ 5 ಕೆಜಿ ಅಕ್ಕಿ ಬದಲಿಗೆ ನೀಡಲಿರುವ ಇಂದಿರಾ ಕಿಟ್‌ನಲ್ಲಿ 2 ಕೆ.ಜಿ ತೊಗರಿ ಬೇಳೆ, 1 ಲೀಟರ್ ಅಡುಗೆ ಎಣ್ಣೆ, 1 ಕಿಲೋ ಸಕ್ಕರೆ ಮತ್ತು 1 ಕಿಲೋ ಉಪ್ಪು ದೊರೆಯಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.


ಬಡವರಿಗೆ ನೆಮ್ಮದಿಯ ಬದುಕು
ಅನ್ನಭಾಗ್ಯ ಯೋಜನೆಯಡಿ ಇಂದಿರಾ ಕಿಟ್ ನೀಡುವ ಸರ್ಕಾರದ ನಿರ್ಧಾರ ಅತ್ಯಂತ ಪ್ರಯೋಜನಕಾರಿ ಮಾತ್ರವಲ್ಲದೆ ಮುಂದಿನ ದಿನಗಳಲ್ಲಿ ಬಡವರಿಗೆ ನೆಮ್ಮದಿಯ ಬದುಕು ನೀಡಲಿದೆ.ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ.ಅಕ್ಕಿಯನ್ನು ನೀಡುತ್ತಿರುವ ಕಾರಣ ಅಕ್ಕಿ ಕಾಳಸಂತೆಯಲ್ಲೂ ಮಾರಾಟವಾಗುತ್ತಿದೆ ಮತ್ತು ಬೇಕಾಬಿಟ್ಟಿ ಬಳಕೆಯಾಗುತ್ತಿದೆ ಎಂಬ ವಿಚಾರ ಸರಕಾರದ ಗಮನಕ್ಕೆ ಬಂದಿರುವ ಕಾರಣ ಹತ್ತು ಕೆ.ಜಿ ಅಕ್ಕಿಯನ್ನು 5 ಕೆ.ಜಿ.ಗೆ ಇಳಿಸಿ, 5 ಕೆ.ಜಿ ಅಕ್ಕಿಯ ಬದಲಾಗಿ ಇಂದಿರಾ ಆಹಾರ ಕಿಟ್ ನೀಡಲು ಸರಕಾರ ತೀರ್ಮಾನವನ್ನು ಕೈಗೊಂಡಿರುವುದು ಅತ್ಯುತ್ತಮ ಕಾರ್ಯವಾಗಿದೆ.ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನತೆಗೆ ಈ ಕಿಟ್ ಹೊಸ ಆಶಾಭಾವನೆಯನ್ನು ಮೂಡಿಸಿದ್ದು ಮುಂದಿನ ದಿನಗಳಲ್ಲಿ ಬಡವರಿಗೆ ಇದರಿಂದ ತುಂಬಾ ಪ್ರಯೋಜನವಾಗಲಿದೆ.ಇದು ಕರ್ನಾಟಕದ ಕಾಂಗ್ರೆಸ್ ಸರಕಾರದ ಕೊಡುಗೆಯಾಗಿದ್ದು, ಕಾಂಗ್ರೆಸ್ ಎಂದೆಂದೂ ಬಡವರ ಪರ ಎಂಬುದು ಸಾಬೀತಾಗಿದೆ
-ಅಶೋಕ್ ಕುಮಾರ್ ರೈ ಶಾಸಕರು,ಪುತ್ತೂರು

LEAVE A REPLY

Please enter your comment!
Please enter your name here