ರೋಟರಿ ಕ್ಲಬ್ ಪುತ್ತೂರು ಈಸ್ಟ್, ರೋಟರಿ ಕ್ಲಬ್ ಪುತ್ತೂರು ಯುವ, ಬಲ್ನಾಡು ಉಜ್ರುಪಾದೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಮತ್ತು ವಿದ್ಯಾಭಿಮಾನಿಗಳ ಸಂಘ ಇದರ ಜಂಟಿ ಆಶ್ರಯದಲ್ಲಿ ಮಂಗಳೂರು ಎ.ಜೆ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಅ.12ರಂದು ಬಲ್ನಾಡು ಉಜ್ರುಪಾದೆ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಲಿದೆ.
ಬಲ್ನಾಡು ಉಜ್ರುಪಾದೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಮತ್ತು ವಿದ್ಯಾಭಿಮಾನಿಗಳ ಸಂಘದ ಗೌರವಾಧ್ಯಕ್ಷರಾದ ಚನಿಲ ತಿಮ್ಮಪ್ಪ ಶೆಟ್ಟಿಯವರು ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಪುತ್ತೂರು ಈಸ್ಟ್ ಅಧ್ಯಕ್ಷ ಶಶಿಧರ್ ಕಿನ್ನಿಮಜಲು, ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷ ಕುಸುಮ್ ರಾಜ್, ಬಲ್ನಾಡು ಉಜ್ರುಪಾದೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಮತ್ತು ವಿದ್ಯಾಭಿಮಾನಿಗಳ ಸಂಘದ ಅಧ್ಯಕ್ಷ ನಾರಾಯಣ ಪಾಟಾಳಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ಶ್ರೀಮತಿ ಭವಾನಿ, ಎಸ್.ಡಿ.ಎಂ.ಸಿ ಅಧ್ಯಕ್ಷ ರಾಧಾಕೃಷ್ಣ ನಾಗಗದ್ದೆರವರು ಭಾಗವಹಿಸಲಿದ್ದಾರೆ ಎಂದು ರೋಟರಿ ಕ್ಲಬ್ ಪುತ್ತೂರು ಈಸ್ಟ್, ರೋಟರಿ ಕ್ಲಬ್ ಪುತ್ತೂರು ಯುವ, ಬಲ್ನಾಡು ಉಜ್ರುಪಾದೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಮತ್ತು ವಿದ್ಯಾಭಿಮಾನಿಗಳ ಸಂಘ,ಎ.ಜೆ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲಭ್ಯವಿರುವ ತಜ್ಞರು…
*ಸಾಮಾನ್ಯ ವೈದ್ಯರು *ಇಸಿಜಿ ತಂತ್ರಜ್ಞರು *ಕಣ್ಣಿನ ತಜ್ಞರು *ಚರ್ಮರೋಗ ತಜ್ಞರು *ಮಕ್ಕಳ ತಜ್ಞರು *ಸ್ತ್ರೀರೋಗ ತಜ್ಞರು *ರಕ್ತದೊತ್ತಡ ಮತ್ತು *ಸಕ್ಕರೆ ತಪಾಸಣೆ
ಸೇವೆಗಳು..
ಕಣ್ಣು, ಕಿವಿ, ಮೂಗು, ಗಂಟಲು, ಹಲ್ಲು ತಪಾಸಣೆ ಹಾಗೂ ಇತರ ಆರೋಗ್ಯ ಸಲಹೆಗಳು ಶಿಬಿರದಲ್ಲಿ ಲಭ್ಯವಿದೆ