ವೇಯ್ಟ್ ಲಿಫ್ಟಿಂಗ್ ಸ್ಪರ್ಧೆ: ಫಿಲೋಮಿನಾ ಪ್ರೌಢಶಾಲಾ ವಿದ್ಯಾರ್ಥಿ ಸುಹಾನ್ ರೈ ಜೆ. ರಾಷ್ಟ್ರಮಟ್ಟಕ್ಕೆ ಆಯ್ಕೆ

0

ಪುತ್ತೂರು : ಉಪನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಧಾರವಾಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಶಹರ ವಲಯ ಹುಬ್ಬಳ್ಳಿ, ಹಾಗೂ ಸೈಂಟ್ ಪಾವಲ್ಸ್ ಆಂಗ್ಲ ಮಾಧ್ಯಮ ಶಾಲೆ, ಹುಬ್ಬಳ್ಳಿ, ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ 17ರ ವಯೋಮಾನದ ಬಾಲಕರ ವಿಭಾಗದಲ್ಲಿ ಸಂತ ಫಿಲೋಮಿನಾ ಪ್ರೌಢಶಾಲೆಯ ವಿದ್ಯಾ ಸುಹಾನ್ ರೈ ಜೆ. ಚಿನ್ನದ ಪದಕ ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಇವರು ಬೆಟ್ಟಂಪಾಡಿ ನಿವಾಸಿ, ಶಾಲಾ ಹಿರಿಯ ವಿದ್ಯಾರ್ಥಿ ಜಯಪ್ರಸಾದ್ ರೈ ಹಾಗೂ ಸುಪ್ರಿಯ ರೈ ದಂಪತಿ ಪುತ್ರ. 17ರ ವಯೋಮಾನದ ಬಾಲಕರ ವಿಭಾಗದಲ್ಲಿ ಡೆಜಿಲ್ ರೊಯ್ ರಾಜ್ಯಮಟ್ಟದಲ್ಲಿ ಬೆಳ್ಳಿಯ ಪದಕವನ್ನು ಪಡೆದುಕೊಂಡಿರುತ್ತಾರೆ. ಇವರು ಸೋಮವಾರಪೇಟೆ ನಿವಾಸಿ ರಾಯಮನ್ ಕೆ. ವಿ. ಹಾಗೂ ಲೀನಾ ರಾಯ್ ದಂಪತಿ ಪುತ್ರ.
ಇವರನ್ನು ಶಾಲಾ ಸಂಚಾಲಕರು, ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಹಿರಿಯ ವಿದ್ಯಾರ್ಥಿ ಸಂಘ, ರಕ್ಷಕ ಶಿಕ್ಷಕ ಸಂಘ, ಶಿಕ್ಷಕ – ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ. ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ನರೇಶ್ ಲೋಬೋ ಮತ್ತು ಧನ್ಯಶ್ರೀ ತರಬೇತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here