ಪುತ್ತೂರು: ನಿಖಾಹ ಕಾರ್ಯಕ್ರಮದಲ್ಲಿ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ದೂರು- ಪ್ರತಿದೂರು ದಾಖಲಾದ ಬಗ್ಗೆ ವರದಿಯಾಗಿದೆ.
ಶಬೀರ್ ಅಲಿಯಾಸ್ ಚಬ್ಬಿ ಎಂಬಾತನ ನಿಖಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ಮತ್ತು ಪ್ರತಿದೂರು ದಾಖಲಾಗಿದೆ.
ಅಬುಸಾಲಿ ಆದಂ ಕುಂಞ ನೀಡಿದ ದೂರಿನ ಅನ್ವಯ, ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 142/2025 ರಂತೆ ಕಲ໐: 118(1), 115(2), 351(2) r/w 190 BNS 2023 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಅಹಮದ್ ರಯೀಸ್ ಎಂಬಾತ ತನ್ನ ಮೇಲೂ ಇತರರು ಸೇರಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದು, ದೂರಿನ ಅನ್ವಯ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 144/2025 ರಂತೆ ಕಲಂ: 352, 118(1), 115(2), 351(2) r/w 3(5) BNS-2023 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.