ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಪುತ್ತೂರು, ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರ ಕೌಡಿಚ್ಚಾರು ಹಾಗೂ ಗ್ರಾಮ ಪಂಚಾಯತ್ ಅರಿಯಡ್ಕ ಇವರ ಸಂಯುಕ್ತ ಆಶ್ರಯದಲ್ಲಿ ಅ.14ರಂದು 15ನೇ ವರ್ಷದ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ ನಡೆಯಲಿದೆ.
ಬೆಳಿಗ್ಗೆ 9ಗಂಟೆಗೆ ಕೌಡಿಚ್ಚಾರು ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರದಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ ನಡೆಯಲಿದೆ. ಗ್ರಾಮಸ್ಥರು ಸಾಕು ನಾಯಿಗಳಿಗೆ ಲಸಿಕೆ ಹಾಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.