ಎಸ್‌ಡಿಪಿಐ ಮುಖಂಡ ರಿಯಾಜ್ ಕಡಂಬುಗೆ ನ್ಯಾಯಾಂಗ ಬಂಧನ

0

ಪುತ್ತೂರು: ಎಸ್‌ಡಿಪಿಐ ಮುಖಂಡ ರಿಯಾಜ್ ಕಡಂಬುಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹಿರಿಯಡ್ಕ ಸಬ್ ಜೈಲ್‌ಗೆ ರವಾನಿಸಲಾಗಿದ್ದು, ದ್ವೇಷ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಈ ಶಿಕ್ಷೆ ವಿಧಿಸಲಾಗಿದೆ.

ಜುಲೈನಲ್ಲಿ ಬ್ರಹ್ಮಾವರ ತಾಲೂಕಿನ ಕುಂಜಾಲು ಬಳಿ ದನದ ತಲೆ ಪತ್ತೆಯಾಗಿತ್ತು. ಇದು ವ್ಯವಸ್ಥಿತ ಷಡ್ಯಂತ್ರ ಎಂದು ರಿಯಾಜ್ ಕಡಂಬು ಹೇಳಿಕೆ ನೀಡಿದ್ದರು. ಜುಲೈ 15 ರಂದು ಉಡುಪಿ ನಗರ ಠಾಣೆಯಲ್ಲಿ ಈ ಬಗ್ಗೆ ಕೇಸ್ ದಾಖಲಾಗಿತ್ತು. ಜಾಮೀನು ನಿಯಮಗಳಿಗೆ ವಿರುದ್ಧವಾಗಿ ನಡೆದುಕೊಂಡ ಹಿನ್ನೆಲೆಯಲ್ಲಿ, ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಉಡುಪಿ ಎಸ್‌ಪಿ ಹರಿರಾಮ್ ಶಂಕರ್ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here