ಪುತ್ತೂರು: ಪಾಳ್ಯತ್ತಡ್ಕ ಶ್ರೀ ಗಜಾನನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ ಅ.10ರಂದು ನಡೆಯಿತು. ಕಾರ್ಯಕ್ರಮದಲ್ಲಿ ಒಂದನೇ ಸಂಕಲನಾತ್ಮಕ ಮೌಲ್ಯಮಾಪನದಲ್ಲಿ ವಿದ್ಯಾರ್ಥಿಗಳು ಗಳಿಸಿದ ಪ್ರಗತಿಯ ಬಗ್ಗೆ ತಿಳಿಸಿಕೊಡಲಾಯಿತು. ಶಾಲೆಯ ಮುಖ್ಯಗುರುಎನ್ ನರೇಂದ್ರ ಭಟ್ ಇವರು ಶಾಲೆಯ ಆಗುಹೋಗುಗಳ ಬಗ್ಗೆ ವಿವರಿಸಿದರು.
ಕಾರ್ಯಕ್ರಮದಲ್ಲಿ ಒಂದನೇ ಸಂಕಲನಾತ್ಮಕ ಮೌಲ್ಯಮಾಪನದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿ, ಆಡಳಿತ ಮಂಡಳಿಯ ಸದಸ್ಯರಾದ ನಾಗಪ್ಪ ಗೌಡ ಹೆತ್ತವರನ್ನು ಉದ್ದೇಶಿಸಿ ಮಾತನಾಡಿದರು. ಆಡಳಿತ ಮಂಡಳಿಯ ಸಂಚಾಲಕ ಶಿವರಾಮ ಪಿ ಶುಭಕೋರಿದರು.ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಆಡಳಿತ ಮಂಡಳಿಯ ನಿರ್ದೇಶಕ ಕೆ ಶಿವರಾಮ ಶರ್ಮ ವಹಿಸಿಕೊಂಡರು. ಪೋಷಕರು ಶಾಲಾ ನಿಧಿ ಸಂಗ್ರಹಕ್ಕೆ ನಿಧಿ ಸಮರ್ಪಣೆ ಮಾಡಿದರು.
ಕಾರ್ಯಕ್ರಮವನ್ನು ಶಿಕ್ಷಕಿಯರಾದ ಮಮತಾ ಸ್ವಾಗತಿಸಿ, ರತ್ನಾವತಿ ವಂದಿಸಿದರು. ಆಶಾ ಕಾರ್ಯಕ್ರಮವನ್ನು ನಿರೂಪಿಸಿದರು.