ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಯಾಗಿ ರವಿಚಂದ್ರ ಯು. ವರ್ಗಾವಣೆಯಾಗಿ ಬಂದಿದ್ದು, ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಉಪ್ಪಿನಂಗಡಿ ನಿವಾಸಿಯಾಗಿರುವ ರವಿಚಂದ್ರ ಅವರು, ರಾಮಕುಂಜ, ನರಿಮೊಗ್ರು ಗ್ರಾ.ಪಂ.ನ ಪಿಡಿಒ ಆಗಿ ಕರ್ತವ್ಯ ನಿರ್ವಹಿಸಿದ್ದು, ಈ ಸಂದರ್ಭಗಳಲ್ಲಿ ಉಪ್ಪಿನಂಗಡಿ, ಕಡಬ, ಗೋಳಿತ್ತೊಟ್ಟು, ಬೆಳಂದೂರು ಗ್ರಾ.ಪಂ.ಗಳಲ್ಲಿ ಪಿಡಿಒ ಆಗಿ ಪ್ರಭಾರ ಹುದ್ದೆಯನ್ನು ನಿರ್ವಹಿಸಿದ್ದರು.
ಇತ್ತೀಚೆಗೆ ಸರಕಾರದ ಮಟ್ಟದಲ್ಲಿ ಪಿಡಿಒಗಳ ವರ್ಗಾವಣೆ ಪ್ರಕ್ರಿಯೆ ನಡೆದಿದ್ದು, ಈ ಸಂದರ್ಭ ರವಿಚಂದ್ರ ಅವರನ್ನು 34 ನೆಕ್ಕಿಲಾಡಿ ಗ್ರಾ.ಪಂ.ಗೆ ಹಾಗೂ 34 ನೆಕ್ಕಿಲಾಡಿ ಗ್ರಾ.ಪಂ.ನಲ್ಲಿ ಪ್ರಭಾರ ನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರವೀಣ್ ಕುಮಾರ್ ಅವರನ್ನು ಉಳ್ಳಾಲ ತಾಲೂಕಿಗೆ ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿತ್ತು. ರವಿಚಂದ್ರ ಅವರು 34 ನೆಕ್ಕಿಲಾಡಿ ಗ್ರಾ.ಪಂ. ಪಿಡಿಒ ಅಲ್ಲದೇ ಪುತ್ತೂರು ತಾ.ಪಂ.ನಲ್ಲಿ ಸಹಾಯಕ ಲೆಕ್ಕಾಧಿಕಾರಿಯಾಗಿಯೂ ಪ್ರಭಾರ ನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.