ಕಡಬ: ಕಡಬ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಸಭೆ ಕಡಬ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ದ.ಕ.ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಉಷಾ ಅಂಚನ್ರವರ ನೇತೃತ್ವದಲ್ಲಿ ಸಭೆ ನಡೆಯಿತು.
ಕಡಬ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾದಿನೇಶ್, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್, ಕೆಪಿಸಿಸಿ ಸಂಯೋಜಕ ಜಿ.ಕೃಷ್ಣಪ್ಪ, ಜಿ.ಪಂ.ಮಾಜಿ ಸದಸ್ಯ ಪಿ.ಪಿ.ವರ್ಗೀಸ್, ಕಡಬ ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷ ಫೈಝಲ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಶ್ರಫ್ ಶೇಡಿಗುಂಡಿ, ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷೆ ತಮನ್ನಾ ಜಬೀನ್, ಉಪಾಧ್ಯಕ್ಷೆ ನೀಲಾವತಿ ಶಿವರಾಂ ಮತ್ತಿತರರು ಉಪಸ್ಥಿತರಿದ್ದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಗೀತಾ ಮಂಗಳೂರು, ನಮಿತಾ ಡಿ.ರಾವ್ ಅವರು ಉಸ್ತುವಾರಿಗಳಾಗಿ ಆಗಮಿಸಿ ಸಲಹೆ ಸೂಚನೆ ನೀಡಿದರು. ಸಭೆಯಲ್ಲಿ ಮಹಿಳಾ ಕಾಂಗ್ರೆಸ್ಗೆ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಜಿಲ್ಲಾ ಮಹಿಳಾ ಕಾಂಗ್ರೆಸ್ಗೆ ಸದಸ್ಯರ ಆಯ್ಕೆ ಮಾಡಲಾಯಿತು. ಮತ ಕಳ್ಳತನದ ಬಗ್ಗೆ ಸಹಿ ಸಂಗ್ರಹ ಮಾಡಲಾಯಿತು.