ಸಿಎಂ,ಜನಗಣತಿ ಕುರಿತು ಫೆಸ್‌ಬುಕ್‌ನಲ್ಲಿ ಅವಹೇಳನಕಾರಿ ಸಂದೇಶ – ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದಿಂದ ದೂರು

0

ಪುತ್ತೂರು:ರಾಜ್ಯದಲ್ಲಿ ನಡೆಯುತ್ತಿರುವ ಜನಗಣತಿ ಮತ್ತು ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣವಾದ ಫೆಸ್‌ಬುಕ್‌ನಲ್ಲಿ ಅವಹೇಳನಕಾರಿಯಾಗಿ ಬರೆಯುವ ಮೂಲಕ ಸಂವಿಧಾನ ವಿರೋಧಿ ಕೃತ್ಯ ಮತ್ತು ಕೋಮು ಪ್ರಚೋದನೆ ಮಾಡಿರುವ ಆರೋಪದಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದಿಂದ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.


ಅ.8ರಂದು ವಸಂತ ಭಟ್ ಎಂಬವರು ಫೆಸ್‌ಬುಕ್ ಖಾತೆಯಲ್ಲಿ, ‘ಕಾಂಗ್ರೆಸ್ ಶಾಸಕರಿಗೆ ಒಂದು ದಿನ ಜನಗಣತಿ ಮಾಡಲು ಅದ್ರಾಮ ಆದೇಶ ನೀಡಬೇಕು’ ಎಂಬುದಾಗಿ ಬರೆಯುವ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಅವಹೇಳನಕಾರಿಯಾಗಿ ಸಂಬೋಧಿಸಿ ಕೋಮು ಪ್ರಚೋದನೆ ಮಾಡಿದ್ದಾರೆ.ಸರಕಾರದ ಮಹತ್ತರ ಯೋಜನೆಯಾಗಿರುವ ಜನಗಣತಿಯನ್ನು ಅವಹೇಳನ ಮೂಲಕ ಸರಕಾರದ ಯೋಜನೆ ತಡೆಯುವ ಪ್ರಯತ್ನ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನ ಮಾಡಿದ್ದಾರೆ.ಇದರ ಜೊತೆಗೆ ಅವರು ನಿರಂತರವಾಗಿ ಪುತ್ತೂರು ಶಾಸಕರ ವಿರುದ್ಧ ಅವಹೇಳನಕಾರಿಯಾಗಿ ಸಂದೇಶ ಹಂಚುವ, ಕೋಮುದ್ವೇಷ ಹರಡುವ ಮತ್ತು ಸಮಾಜದಲ್ಲಿ ಧರ್ಮ ಧರ್ಮಗಳ ಮಧ್ಯೆ ಗಲಭೆ ಸೃಷ್ಟಿಸುವ ಪ್ರಯತ್ನ ಮಾಡುವ ಮೂಲಕ ಸಂವಿಧಾನ ವಿರೋಧಿ ಸಂದೇಶಗಳನ್ನು ನಿರಂತರ ಹರಡುವುದರೊಂದಿಗೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಸುಪ್ರೀತ್ ಕಣ್ಣಾರಾಯ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

LEAVE A REPLY

Please enter your comment!
Please enter your name here