ರಾಮಕುಂಜ: ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ ಅ.೯ರಂದು ನಡೆದ ಜಿಲ್ಲಾ ಮಟ್ಟದ 14ರ ವಯೋಮಾನದ ಬಾಲಕರ ಖೋ ಖೋ ಪಂದ್ಯಾಟದಲ್ಲಿ ಪುತ್ತೂರು ತಾಲೂಕು ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು ಈ ತಂಡ ಪ್ರತಿನಿಧಿಸಿದ್ದ ಹಳೆನೇರೆಂಕಿ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಚಿಂತನ್ ಚಾಮರಾಜನಗರದಲ್ಲಿ ನಡೆಯುವ ಮೈಸೂರು ವಿಭಾಗ ಮಟ್ಟದ ಖೋ ಖೋ ಪಂದ್ಯಾಟಕ್ಕೆ ದಕ್ಷಿಣ ಕನ್ನಡ ಜಿಲ್ಲಾ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಹಳೆನೇರೆಂಕಿ ಗ್ರಾಮದ ಬರೆಂಬೆಟ್ಟು ನಿವಾಸಿ ಶಶಿಧರ ಬಿ.ಹಾಗೂ ಸುಜಾತ ಬಿ.ದಂಪತಿ ಪುತ್ರರಾದ ಚಿಂತನ್ಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ರಾಮಣ್ಣ ಬಿ., ಹಾಗೂ ರಾಘವ ತರಬೇತಿ ನೀಡಿದ್ದಾರೆ.