ನೆಲ್ಯಾಡಿ: ಕಡಬ ತಾಲೂಕು ಭೂ ನ್ಯಾಯ ಮಂಡಳಿಗೆ ನೆಲ್ಯಾಡಿ ನಿವಾಸಿ ಅಬ್ರಹಾಂ ಕೆ.ಪಿ.ಅವರನ್ನು ನಾಮ ನಿರ್ದೇಶನಗೊಳಿಸಿ ಕಂದಾಯ ಇಲಾಖಾ(ಭೂ ಸುಧಾರಣೆ) ಅಧೀನ ಕಾರ್ಯದರ್ಶಿಯವರು ಆದೇಶ ಮಾಡಿದ್ದಾರೆ.
ನೆಲ್ಯಾಡಿ ಗ್ರಾಮದ ಕುನ್ನುಮೇಲ್ ನಿವಾಸಿ ಕೆ.ವಿ.ಪೌಲೋಸ್ ಹಾಗೂ ಮರಿಯಮ್ಮ ದಂಪತಿ ಪುತ್ರರಾದ ಅಬ್ರಹಾಂ ಕೆ.ಪಿ.ಅವರು ನೆಲ್ಯಾಡಿ ಗ್ರಾ.ಪಂ. ಮಾಜಿ ಸದಸ್ಯರಾಗಿದ್ದಾರೆ. ಕಡಬ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ಮಲಂಕರ ಅರ್ಥೋಡಕ್ಸ್ ಸಭಾದ ಅಸೋಸಿಯೇಶನ್ ಸದಸ್ಯರಾಗಿ, ನೆಲ್ಯಾಡಿ ಪಿಎಂಶ್ರೀ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲಾ ಪೂರ್ವವಿದ್ಯಾರ್ಥಿ ಸಂಘದ ಸದಸ್ಯರಾಗಿ, ನೆಲ್ಯಾಡಿ ಸಂತಜಾರ್ಜ್ ಪ.ಪೂ.ಕಾಲೇಜು ಪೂರ್ವವಿದ್ಯಾರ್ಥಿ ಸಂಘದ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆ ರಕ್ಷಕ-ಶಿಕ್ಷಕ ಸಂಘದ ಮಾಜಿ ಅಧ್ಯಕ್ಷರಾಗಿದ್ದಾರೆ. ಇವರು ಕಾಂಗ್ರೆಸ್ ಪಕ್ಷದಲ್ಲಿ ಹಲವು ವರ್ಷಗಳಿಂದ ಸಕ್ರೀಯರಾಗಿದ್ದು ಸಾಮಾಜಿಕ ಸೇವೆ ಹಾಗೂ ವಿವಿಧ ಸಂಘಟನೆಗಳಲ್ಲಿ ಸಕ್ರೀಯರಾಗಿದ್ದಾರೆ.