ಪುತ್ತೂರು: ಲೇಖಕಿ, ಹವ್ಯಾಸಿ ಬರಹಗಾರ್ತಿ, ಕವಯತ್ರಿ, ಧಾರ್ಮಿಕ, ಸಾಮಾಜಿಕ ಹಾಗೂ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿರುವ ಹರ್ಷಿತಾ ಹರೀಶ್ ಕುಲಾಲ್ ಇವರು ಕಾವ್ಯಶ್ರೀ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ (ರಿ) ಕರ್ನಾಟಕ ಹಾಗೂ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಅ.19ರಂದು ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.