ಪುತ್ತೂರು: ಕರ್ನಾಟಕ ಸರಕಾರದ ಶಿಕ್ಷಣ ಇಲಾಖೆ, ಉರ್ದು ಮತ್ತು ಇತರ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯದ ಮೂಲಕ ಆಯೋಜಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ವಿಜ್ಞಾನ ವಿಚಾರಗೋಷ್ಠಿಯು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಕೊಡಿಯಾಲ್ ಬೈಲ್, ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಅ.10ರಂದು ನಡೆಯಿತು.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರೌಢ ಶಾಲೆಗಳಿಂದ ಹಲವಾರು ವಿಜೇತ ವಿದ್ಯಾರ್ಥಿಗಳು ಭಾಗವಹಿಸಿ “ಕ್ವಾಂಟಮ್ ಯುಗದ ಆರಂಭ: ಸಾಮರ್ಥ್ಯಗಳು ಮತ್ತು ಸವಾಲುಗಳು” ಎಂಬ ವಿಚಾರದ ಬಗ್ಗೆ ವಿಷಯವನ್ನು ಮಂಡಿಸಿದರು.
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದ 9 ನೇ ತರಗತಿ ವಿದ್ಯಾರ್ಥಿ ಅತೀತ್ ಹೆಚ್. ರೈ ( ಹರೀಶ್ ರೈ ಮತ್ತು ಜಲಜಾ ಹೆಚ್ ರೈ ದಂಪತಿ ಪುತ್ರ) ಅವರ ವಿಷಯ ಮಂಡನೆಗೆ ದ್ವಿತೀಯ ಸ್ಥಾನ ಲಭಿಸಿದೆ. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರು ಈ ಸಾಧನೆಗೆ ಅಭಿನಂದನೆ ಸಲ್ಲಿಸಿದರು.