ಪುತ್ತೂರು: ಅ.20ರಂದು ಶಾಸಕ ಅಶೋಕ್ ರೈ ಅವರ ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಪ್ರಯುಕ್ತ ನಡೆಯುವ ಅಶೋಕ ಜನಮನ-2025 ವಸ್ತ್ರ ವಿತರಣೆ ಕಾರ್ಯಕ್ರಮದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದು, ಕಾರ್ಯಕ್ರಮ ಯಶಸ್ವಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಶೇಷ ಪ್ರಾರ್ಥನೆ ನಡೆಯಿತು.
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರಭಟ್, ಪುಡಾ ಸದಸ್ಯ ನಿಹಾಲ್ ಪಿ ಶೆಟ್ಟಿ, ಮಹಾಬಲ ರೈ, ಸಂತೋಷ್ ಭಂಡಾರಿ, ಸುದರ್ಶನ್, ಗಿರೀಶ್ ರೈ ಸಂಟ್ಯಾರ್, ದಾಮೋದರ್ ಮುರ, ರೂಪರೇಖಾ ಆಳ್ವ, ಹರಿಣಾಕ್ಷಿ, ಜಯಂತ ಕೆಂಗುಡೇಲು, ಪೂರ್ಣೇಶ್ ಭಂಡಾರಿ, ರಂಜಿತ್ ಬಂಗೇರ, ರೋಶನ್ ರೈ ಬನ್ನೂರು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಶಾಸಕ ಅಶೋಕ್ ರೈ ನೇತೃತ್ವದಲ್ಲಿ ನಡೆಯುವ ಅಶೋಕ ಜನಮನ ಕಾರ್ಯಕ್ರಮದ ಯಶಸ್ವಿಗಾಗಿ ಶ್ರೀ ಮಹಾಲಿಂಗೇಶ್ವರ ದೇವರಲ್ಲಿ ಪಕ್ಷದ ವತಿಯಿಂದ ವಿಶೇಷ ಪ್ರಾರ್ಥನೆ ನಡೆದಿದೆ. ಎಲ್ಲವೂ ನಿರ್ವಿಘ್ನವಾಗಿ ನಡೆದು ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ದೇವರಲ್ಲಿ ಬೇಡಿಕೊಳ್ಳಲಾಗಿದೆ. ಎಲ್ಲಾ ಧರ್ಮದ ಧಾರ್ಮಿಕ ಕೇಂದ್ರಕ್ಕೆ ತೆರಳಿ ಪಕ್ಷದ ವತಿಯಿಂದ ವಿಶೇಷ ಪ್ರಾರ್ಥನೆ ನಡೆಯಲಿದೆ.
ಕೃಷ್ಣಪ್ರಸಾದ್ ಆಳ್ವ, ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಪುತ್ತೂರು