ವಿಟ್ಲ: ಹುಡುಗಿ ನೋಡುವ ವಿಚಾರದಲ್ಲಿ ಫೋಟೋ, ವೀಡಿಯೋ ತೆಗೆದು ಬೆದರಿಕೆಯೊಡ್ಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಬಗ್ಗೆ ವರದಿಯಾಗಿದೆ.
ಸೌದಿಯಲ್ಲಿ ಉದ್ಯೋಗದಲ್ಲಿರುವ ಕೇರಳ ನಿವಾಸಿ ಮಹಮ್ಮದ್ ಅಶ್ರಫ್ ತಾವರಕಡನ್( 53) ಎಂಬವರು ದೂರು ನೀಡಿದ್ದು, ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಶ್ರಫ್ 2024ರ ಸಪ್ಟೆಂಬರ್ನಲ್ಲಿ ಮದುವೆಯ ಸಲುವಾಗಿ ಮಂಗಳೂರಿಗೆ ಬಂದಿದ್ದು, ಬಶೀರ್, ಸಫಿಯಾ ಮತ್ತು ಇತರ ಆರೋಪಿತರು ಅವರನ್ನು ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು, ನಂತರ ಅವುಗಳನ್ನು ಲೀಕ್ ಮಾಡುವುದಾಗಿ ಬೆದರಿಸಿ 44.80 ಲಕ್ಷ ರೂಪಾಯಿ ಹಣ ವಂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 145/2025 ಕಲಂ: 318(4), 308(2), 115(2), 351(2), r/w 3(5) BNS-2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.