ರಾಮಕುಂಜ: ಕ್ರೀಡಾ ಹಾಗೂ ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಬಿಳಿನೆಲೆ ಇವರ ಸಂಯುಕ್ತ ಆಶ್ರಯದಲ್ಲಿ ಅ.9ರಂದು ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆದ 14 ಮತ್ತು 17ರ ವಯೋಮಾನದ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟದಲ್ಲಿ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
14ರ ವಯೋಮಾನದ ಬಾಲಕರ ವಿಭಾಗದಲ್ಲಿ ಮೋಕ್ಷಿತ್ ಆರ್ ಗೌಡ ಸರ್ವಾಂಗೀಣ ಆಟಗಾರ, ಪೂರ್ವಿಕ್ ಉತ್ತಮ ಓಟಗಾರ ಹಾಗೂ 17ರ ವಯೋಮಾನದ ಬಾಲಕರ ವಿಭಾಗದಲ್ಲಿ ಆಕಾಶ್ ಗೌಡ ಉತ್ತಮ ಓಟಗಾರನಾಗಿ ಹೊರಹೊಮ್ಮಿ ಮೈಸೂರು ಜಿಲ್ಲೆಯ ಚಾಮರಾಜನಗರದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಖೋಖೋ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರೇಮಾ ಬಿ., ದಿವ್ಯ ಪಿ.ಎನ್., ರಾಘವ, ಕಿಶನ್ ತರಬೇತಿ ನೀಡಿದ್ದರು.