ನ. 23 ರ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಹ್ವಾನ
ಬಡಗನ್ನೂರು : ನ.23 ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮಕ್ಕೆ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾದ ಬಿ. ಕೆ. ಹರಿಪ್ರಸಾದ್ ರವರನ್ನು ಶ್ರೀ ಕ್ಷೇತ್ರ ಗೆಜ್ಜೆಗಿರಿ ನಿಯೋಗ ಭೇಟಿ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ, ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ, ಅಧ್ಯಕ್ಷ ರವಿಪೂಜಾರಿ ಚಿಲಿಂಬಿ, ಗೆಜ್ಜೆಗಿರಿ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ, ಕೋಶಾಧಿಕಾರಿ ಮೋಹನ್ ದಾಸ್ ಬಂಗೇರ,ಪ್ರಮುಖರಾದ ಎಸ್ ಆರ್ ಶೈಲೇಂದ್ರ ಸುವರ್ಣ, ರಾಜೇಂದ್ರ ಚಿಲಿಂಬಿ, ಹರೀಶ್ ಕೆ ಪೂಜಾರಿ, ರಾಕೇಶ್, ವಿದ್ಯಾರಾಕೇಶ್, ಜಗದೀಶ್, ಅಜಿತ್ ಪಾಲೇರಿ, ಅಶೋಕ್ ಪಡ್ಪು,ಹರೀಶ್ ಪಚ್ಚನಾಡಿ ಉಪಸ್ಥಿತರಿದ್ದರು..