ಪುತ್ತೂರು: ಪುಣಚ ಗ್ರಾಮ ಪಂಚಾಯತ್‌ನ ನೂತನ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಸೃಜನ್ ಎ.ಜಿಯವರು ಅಧಿಕಾರ ವಹಿಸಿಕೊಂಡಿದ್ದಾರೆ.
ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿದ್ದ ರವಿಯವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಸೃಜನ್ ಎ.ಜಿಯವರು ಅಧಿಕಾರ ವಹಿಸಿಕೊಂಡಿದ್ದು ಇವರು ಸುಳ್ಯ ತಾಲೂಕು ಸಂಪಾಜೆ ಗ್ರಾಮದ ದೊಡ್ಡಡ್ಕ ನಿವಾಸಿಯಾಗಿದ್ದಾರೆ. ಸೃಜನ್‌ರವರು ಈ ಹಿಂದೆ ಸುಳ್ಯದ ಆಲೆಟ್ಟಿ ಗ್ರಾಮ ಪಂಚಾಯತ್‌ನಲ್ಲಿ ಗ್ರೇಡ್-1 ಕಾರ್ಯದರ್ಶಿಯಾಗಿ ಪ್ರಭಾರ ಪಿಡಿಓ ಆಗಿ ಕರ್ತವ್ಯ ನಿರ್ವಹಿಸಿದ್ದರು. ಅಲ್ಲಿಂದ ವರ್ಗಾವಣೆಗೊಂಡು ಪುಣಚ ಗ್ರಾಪಂಕ್ಕೆ ಬಂದಿದ್ದು ಹೆಚ್ಚುವರಿಯಾಗಿ ಕರೋಪಾಡಿ ಗ್ರಾಪಂನ ಪ್ರಭಾರ ಪಂಚಾಯತ್ ಅಭಿವೃದ್ದಿ ಅಧಿಕಾರಿಯಾಗಿಯೂ ಕರ್ತವ್ಯ ನಿರ್ವಹಿಸಲಿದ್ದಾರೆ.