ತ್ರೋಬಾಲ್ ಪಂದ್ಯಾಟ-ದರ್ಬೆ ಬೆಥನಿ ಶಾಲೆಯ ಬಾಲಕಿಯರ ತ್ರೋಬಾಲ್ ತಂಡ ಮೈಸೂರು ವಿಭಾಗೀಯ ಹಂತಕ್ಕೆ ಆಯ್ಕೆ

0

ಪುತ್ತೂರು: ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ಮಂಗಳೂರು ಹಾಗೂ ಶ್ರೀ ಮಹಾಲಿಂಗೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಸುರತ್ಕಲ್‌ ಇವರ ಸಂಯುಕ್ತ ಆಶ್ರಯದಲ್ಲಿ ಅ.13ರಂದು ನಡೆದ 2025-26ನೇ ಸಾಲಿನ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪುತ್ತೂರು ತಾಲೂಕನ್ನು ಪ್ರತಿನಿಧಿಸಿದ ದರ್ಬೆ ಪಾಂಗಳಾಯಿಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ತಂಡವು ಪ್ರಥಮ ಸ್ಥಾನ ಗಳಿಸಿ, ಮೈಸೂರು ವಿಭಾಗೀಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ.
​ಪಂದ್ಯಾವಳಿಯಲ್ಲಿ ವಿದ್ಯಾರ್ಥಿನಿಯರು ಅತ್ಯುತ್ತಮ ಪ್ರದರ್ಶನ ನೀಡಿದ್ದು, ಆದ್ಯ ‘ಬೆಸ್ಟ್ ರಿಸಿವರ್’ ಪ್ರಶಸ್ತಿ ಪಡೆದರೆ, ಸಮನ್ವಿ ಅವರು ‘ಬೆಸ್ಟ್ ಆಲ್ ರೌಂಡರ್’ ವೈಯಕ್ತಿಕ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.


​ಶಾಲಾ ಪ್ರಾಂಶುಪಾಲೆ ಭಗಿನಿ ಅನಿತಾರವರ ಮಾರ್ಗದರ್ಶನದಲ್ಲಿ, ದೈಹಿಕ ಶಿಕ್ಷಕರಾದ ನಿರಂಜನ್ ಹಾಗೂ ಅಕ್ಷಯ್ ರವರು ತಂಡಕ್ಕೆ ಉತ್ತಮ ತರಬೇತಿಯನ್ನು ನೀಡಿದ್ದರು.

LEAVE A REPLY

Please enter your comment!
Please enter your name here