ಪುತ್ತೂರು: ಮೆಸ್ಕಾಂ ಗ್ರಾಮಾಂತರ ವಿಭಾಗದ ಕುಂಬ್ರ ಶಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಇದ್ದು ಖಾಲಿ ಇರುವ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿಗೊಳಿಸುವಂತೆ ಒಳಮೊಗ್ರು ಗ್ರಾಮ ಪಂಚಾಯತ್ನಿಂದ ಮಂಗಳೂರು ಮೆಸ್ಕಾಂ ಕಾರ್ಯಪಾಲಕ ಅಭಿಯಂತರರಿಗೆ ಮನವಿ ಮಾಡಲಾಗಿದೆ.
ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂಬ್ರ ಮೆಸ್ಕಾಂ ಶಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಇರುವ ಬಗ್ಗೆ ಗ್ರಾಮಸಭೆಯಲ್ಲಿ ಗ್ರಾಮಸ್ಥರು ಖಾಲಿ ಇರುವ ಹುದ್ದೆಗಳನ್ನು ಭರ್ತಿಗೊಳಿಸುವಂತೆ ಇಲಾಖೆಗೆ ಮನವಿ ಮಾಡಲು ಆಗ್ರಹಿಸಿದ್ದರು. ಈ ಬಗ್ಗೆ ನಿರ್ಣಯವನ್ನು ಕೈಗೊಳ್ಳಲಾಗಿತ್ತು ಅದರಂತೆ ನಿರ್ಣಯದ ಪ್ರತಿಯನ್ನು ಲಗತ್ತಿಸಿ ಕಾರ್ಯಪಾಲಕ ಅಭಿಯಂತರರಿಗೆ ಮನವಿ ಮಾಡಲಾಗಿದ್ದು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರ ಭರ್ತಿಗೊಳಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ತಿಳಿಸಿದ್ದಾರೆ.