ವಿಟ್ಲ: ಅಶೋಕ ಜನಮನ -2025 ಕಾರ್ಯಕ್ರಮದ ಕುಳ ಗ್ರಾಮದ ಪ್ರಚಾರ ಸಭೆಯು ಅಳಕೆ ಮಜಲು ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ನಡೆಯಿತು.
ಪಿ. ರಾಜರಾಮ ಶೆಟ್ಟಿ ಕೋಲ್ಪೆಗುತ್ತು, ಶ್ರೀ ಶಾರದಾಬ ಭಜನಾ ಮಂದಿರದ ಅಧ್ಯಕ್ಷರಾದ ಕೃಷ್ಣ ಕಿಶೋರ್ ಭಟ್, ಗ್ರಾಮ ಸಮಿತಿ ಸಂಚಾಲಕರಾದ ಜಯಪ್ರಕಾಶ್ ಬದಿನಾರ್, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ರಾಮಣ್ಣ ಪಿಲಿಂಜ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾಮ ಸಮಿತಿ ಸಂಚಾಲಕರಾದ ಮೋಹನ್ ಗುರ್ಜಿನಡ್ಕ ಸ್ವಾಗತಿಸಿ, ಗ್ರಾಮ ಸಮಿತಿ ಸಂಚಾಲಕರಾದ ಪ್ರವೀಣ್ ಶೆಟ್ಟಿ ಅಳಕೆ ಮಜಲು ವಂದಿಸಿದರು.
