ಪುತ್ತೂರು: ಪುತ್ತೂರಿನ ನೆಹರೂ ನಗರದ ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ “ಪೋಷಕ ಪಥ ಸೇತುಬಂಧ” ಕಾರ್ಯಕ್ರಮ ನಡೆಯಿತು. ವಿವೇಕಾನಂದ ಪದವಿ ಕಾಲೇಜಿನ ಮನಶಾಸ್ತ್ರ ವಿಭಾಗದ ಮುಖ್ಯಸ್ಥ ಚಂದ್ರಕಾಂತ ಗೋರೆ ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಪೋಷಕ ಪ್ರತಿನಿಧಿಯಾಗಿ ಜಯರಾಮ ರೈ ವಿಟ್ಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಮುರಳಿಧರ್ ಎಸ್ ಸ್ವಾಗತಿಸಿ, ಮೆಕ್ಯಾನಿಕಲ್ ವಿಭಾಗದ ಉಪನ್ಯಾಸಕ ಪ್ರಶಾಂತ್ ಕಾರ್ಯಕ್ರಮದ ನಿರೂಪಿಸಿ, ವಂದಿಸಿದರು.
ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸಂಚಾಲಕ ಮಣಿಲ ಮಹಾದೇವ ಶಾಸ್ತ್ರಿ,ಸಿವಿಲ್ ವಿಭಾಗದ ಮುಖ್ಯಸ್ಥ ರವಿರಾಮ್ ಎಸ್ ಹಾಗೂ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥೆ ಪುಷ್ಪ ಬಿ.ಎನ್ ಮತ್ತು ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು.