ನಿಡ್ಪಳ್ಳಿ: ನಿಡ್ಪಳ್ಳಿ ಗ್ರಾಮ ಪಂಚಾಯತ್ ನಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಸಂಧ್ಯಾಲಕ್ಷ್ಮೀಯವರಿಗೆ ಬೀಳ್ಕೊಡುಗೆ ಸಮಾರಂಭ ಅ.14 ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮ ಪಂಚಾಯತಿಗೆ ವರ್ಗಾವಣೆಗೊಂಡ ಸಂಧ್ಯಾಲಕ್ಷ್ಮೀ ಇವರು ನಿಡ್ಪಳ್ಳಿ ಗ್ರಾಮ ಪಂಚಾಯತ್ ನಲ್ಲಿ ಕಳೆದ 9 ವರ್ಷ ಪಿಡಿಒ ಆಗಿ ಪ್ರಾಮಾಣಿಕ ಭ್ರಷ್ಟಾಚಾರ ರಹಿತ ಸೇವೆ ಸಲ್ಲಿಸಿದ ಬಗ್ಗೆ ಪಂಚಾಯತ್ ಮಾಜಿ ಸದಸ್ಯ ಬಾಲಚಂದ್ರ ರೈ ಆನಾಜೆ, ಮಾಜಿ ಅಧ್ಯಕ್ಷೆ ಹಾಲಿ ಸದಸ್ಯೆ ಗೀತಾ.ಡಿ, ಮೆಸ್ಕಾಂ ಬೆಟ್ಟಂಪಾಡಿ ಶಾಖೆಯ ಜೆಇ ಪುತ್ತು ಜೆ, ಹಿರಿಯ ಆರೋಗ್ಯ ಕಾರ್ಯಕರ್ತೆ ಕುಸುಮಾವತಿ ಎ.ವಿ, ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಬೋರ್ಕರ್, ತಾ.ಪಂ.ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಪಂಚಾಯತ್ ಅಧ್ಯಕ್ಷ ವೆಂಕಟ್ರಮಣ ಬೋರ್ಕರ್, ಪಂಚಾಯತ್ ಸದಸ್ಯೆ ನಂದಿನಿ ಅರ್.ರೈ ಅನಿಸಿಕೆ ವ್ಯಕ್ತಪಡಿಸಿ ಶುಭ ಹಾರೈಸಿದರು.
ಸನ್ಮಾನ ಸ್ವೀಕರಿಸಿದ ಪಿಡಿಒರವರು ಅನಿಸಿಕೆ ವ್ಯಕ್ತಪಡಿಸಿ ತನ್ನ ಸೇವಾಧಿಯಲ್ಲಿ ಸಹಕರಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು. ನೂತನ ಪಿಡಿಒ ಆಗಿ ಆಗಮಿಸಿದ ಜಯಪ್ರಕಾಶ್ ರನ್ನು ಪಂಚಾಯತ್ ಅಧ್ಯಕ್ಷ ವೆಂಕಟ್ರಮಣ ಬೋರ್ಕರ್ ಶಾಲು ಹೊದಿಸಿ, ಹೂ ನೀಡಿ ಸ್ವಾಗತಿಸಿದರು.
ಪಂಚಾಯತ್ ಉಪಾಧ್ಯಕ್ಷೆ ಸೀತಾ, ಸದಸ್ಯರಾದ ಸತೀಶ್ ಶೆಟ್ಟಿ, ಬಾಲಚಂದ್ರ ನಾಯ್ಕ, ತುಳಸಿ, ನರೇಗಾ ತಾಂತ್ರಿಕ ಸಂಯೋಜಕ ವಿನೋದ್ ಉಪಸ್ಥಿತರಿದ್ದರು. ಕಾರ್ಯದರ್ಶಿ ಶಿವರಾಮ ಮೂಲ್ಯ ವಂದಿಸಿದರು. ನೂತನ ಪಿಡಿಒ ಆಗಿ ಆಗಮಿಸಿದ ಜಯಪ್ರಕಾಶ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿಗಳಾದ ರೇವತಿ, ವಿನೀತ್ ಕುಮಾರ್, ಸಂಶೀನಾ, ಜಯಕುಮಾರಿ, ಗ್ರಂಥಪಾಲಕಿ ಪವಿತ್ರ. ಜಿ ಸಹಕರಿಸಿದರು. ಆಶಾ ಕಾರ್ಯಕರ್ತೆಯರು, ಸ್ವಚ್ಚತಾ ಘಟಕದ ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಸದಸ್ಯೆಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡರು.