ಕಡಬ: ಸೇವೆ ಖಾಯಂ ಸಹಿತ ವಿವಿಧ ಬೇಡಿಕೆಗಳ ಬಗ್ಗೆ ಮುಂಬರುವ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಸರಕಾರದ ಗಮನ ಸೆಳೆಯುವಂತೆ ವಿಕಲಚೇತನರ ಪುನರ್ವಸತಿ ಕಾರ್ಯಕರ್ತರು ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಅ.14ರಂದು ಕಡಬದಲ್ಲಿ ಮನವಿ ಸಲ್ಲಿಸಿದ್ದಾರೆ.

ವಿಕಲಚೇತನರ ವಿವಿಧೋದ್ದೇಶ ಮತ್ತು ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಸಮಸ್ಯೆ ಬಗ್ಗೆ ಶಾಸಕರೊಂದಿಗೆ ಚರ್ಚೆ ನಡೆಸಿ ಸೇವೆ ಖಾಯಂ ಸಹಿತ ಪುನರ್ವಸತಿ ಕಾರ್ಯಕರ್ತರ ನಾನಾ ಬೇಡಿಕೆಗಳ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪಿಸಿ ಸರಕಾರದ ಗಮನ ಸೆಳೆಯುವಂತೆ ಸಂಘದ ವತಿಯಿಂದ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಮನವಿ ಮಾಡಲಾಯಿತು.
ವಿಕಲಚೇತನರ ವಿವಿಧೋದ್ದೇಶ ಮತ್ತು ಗ್ರಾಮೀಣ/ನಗರ ಪುನರ್ವಸತಿ ಕಾರ್ಯಕರ್ತರ ಜಿಲ್ಲಾ ಘಟಕದ ಅಧ್ಯಕ್ಷ ಜೋನ್ ಬ್ಯಾಪ್ಟಿಸ್ಟ್ ಡಿ.ಸೋಜ, ಘಟಕದ ಪ್ರಮುಖರಾದ ಮುತ್ತಪ್ಪ ಗೌಡ ಪೆರಾಬೆ, ಅಕ್ಷತಾ, ಮೋನಪ್ಪ, ಪ್ರತಿಭಾ, ಶಿಲ್ಪಾ, ಕಾರ್ತಿಕ್ ಉಪಸ್ಥಿತರಿದ್ದರು.