ಪುತ್ತೂರು: ತೆಂಕುತಿಟ್ಟು ಯಕ್ಷಗಾನ ರಂಗದ ಪ್ರಖ್ಯಾತ ಹಿರಿಯ ಭಾಗವತ, ರಸ ರಾಗ ಚಕ್ರವರ್ತಿ ಬಿರುದಾಂಕಿತ ದಿನೇಶ್ ಅಮ್ಮಣ್ಣಾಯ ( 65 ವ) ಅವರು ಇಂದು (ಅ.16) ಅರಸಿನಮಕ್ಕಿಯ ಸ್ವಗೃಹದಲ್ಲಿ ನಿಧನರಾದರು.
ದಿನೇಶ್ ಅಮ್ಮಣ್ಣಾಯ ದಾಮೋದರ ಮಂಡೆಚ್ಚರ ಶಿಷ್ಯರಾಗಿ ಪುತ್ತೂರು ಮೇಳದ ಮೂಲಕ ಕಲಾ ಜೀವನ ಆರಂಭಿಸಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಯಕ್ಷಗಾನ ರಂಗದಲ್ಲಿ ಭಾಗವತರಾಗಿ ಕಲಾ ಸೇವೆ ಸಲ್ಲಿಸಿದ್ದರು. ಆ ಕಾಲದ ಪ್ರಸಿದ್ಧ ಡೇರೆ ಮೇಳವಾಗಿದ್ದ ಕರ್ನಾಟಕ ಮೇಳದಲ್ಲಿ ದಿಗ್ಗಜ ಕಲಾವಿದರನ್ನು ರಂಗದಲ್ಲಿ ಕುಣಿಸಿದ ಕೀರ್ತಿ ಅಮ್ಮಣ್ಣಾಯರದ್ದು. ತುಳು ಪ್ರಸಂಗಗಳಿಗೆ ತನ್ನ ಕಂಠ ಮಾಧುರ್ಯದಿಂದ ಅಪಾರ ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದರು.
ರಸರಾಗ ಚಕ್ರವರ್ತಿ ದಿನೇಶ್ ಅಮ್ಮಣ್ಣಾಯರ ಜೊತೆ ಸುದ್ದಿ ರಂಗಯಾನ