ಪುತ್ತೂರು: ಮಂಗಳೂರು ಮತ್ತು ಉಡುಪಿ ಲೋಕಾಯುಕ್ತ ಕಚೇರಿಯ ಸಿಬ್ಬಂದಿ ಪಿಲಿಕುಳ ನಿಸರ್ಗಧಾಮದ ಅಭಿವೃದ್ಧಿ ಪ್ರಾಧಿಕಾರಕ್ಕೆ ಲೋಕಾಯುಕ್ತರಿಂದ ಸರ್ಚ್ ವಾರಂಟ್ ಪಡೆದು ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಘಟನೆ ಅ.16ರಂದು ನಡೆದಿದೆ.
ಮಂಗಳೂರು ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ. ಕುಮಾರ್, ಸುರೇಶ್ ಕುಮಾರ್ ಪಿ., ಪೊಲೀಸ್ ನಿರೀಕ್ಷಕರಾದ ಭಾರತಿ ಜಿ., ರವಿ ಪೀರು ಪವಾರ್ ಹಾಗೂ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ನಿರೀಕ್ಷಕರಾದ ರಾಜೇಂದ್ರ ನಾಯ್ಕ್ ಎಂ.ಎನ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಪರಿಶೀಲನೆ ವೇಳೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಡಳಿತದಲ್ಲಿ ಕೆಲವು ಲೋಪದೋಷಗಳು ಕಂಡುಬಂದಿದ್ದು, ಸರ್ಚ್ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿದುಬಂದಿದೆ
ಪಿಲಿಕುಳದ ಮೃಗಾಲಯ, ಗುತ್ತು ಮನೆ, ಮಾನಸ ವಾಟರ್ ಪಾರ್ಕ್, ಲೇಕ್ ಗಾರ್ಡನ್, ಸೈನ್ಸ್ ಮ್ಯೂಸಿಯಂ ಮುಂತಾದ ಘಟಕಗಳಲ್ಲಿ ಯಾವುದೇ ಅಕ್ರಮ ಅಥವಾ ಅವ್ಯವಹಾರ ಕಂಡುಬಂದರೆ, ಸಾರ್ವಜನಿಕರು ☎️ 0824-2950997 ಗೆ ಅಥವಾ ನೇರವಾಗಿ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಬಹುದು ಎಂದು ಪೊಲೀಸ್ ಅಧೀಕ್ಷಕರು (ಪ್ರಭಾರ) ಕುಮಾರಚಂದ್ರ ತಿಳಿಸಿದ್ದಾರೆ .