ಕಕ್ಕೂರು ಹಾ.ಉ.ಮಹಿಳಾ ಸಹಕಾರಿ ಸಂಘದ ಸದಸ್ಯರಿಗೆ ಕ್ಷೀರ ಸಂಜೀವಿನಿ ಯೋಜನೆಯಡಿ ದನ ಖರೀದಿಗೆ ಚೆಕ್ ವಿತರಣೆ

0

ಮಹಿಳೆಯರಿಗೆ ಅನುಕೂಲವಾಗುವಂತೆ ಯೋಜನೆ ಜಾರಿ-ಜಯರಾಮ ರೈ ಬಳಜ್ಜ
ಫಲಾನುಭವಿಗಳು ದನ ಖರೀದಿಸಿ ಹಾಲಿನ ಉತ್ಪಾದನೆ ಹೆಚ್ಚಿಸಿ-ಡಾ.ಸತೀಶ್ ರಾವ್

ಪುತ್ತೂರು: ದ.ಕ.ಹಾಲು ಉತ್ಪಾದಕರ ಒಕ್ಕೂಟ, ಕಕ್ಕೂರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ಕ್ಷೀರ ಸಂಜೀವಿನಿ ಯೋಜನೆಯಡಿ ದನ ಖರೀದಿಗೆ ಚೆಕ್ ವಿತರಣಾ ಕಾರ್ಯಕ್ರಮ ಕಕ್ಕೂರು ಸಿದ್ಧಿವಿನಾಯಕ ಭಜನಾ ಮಂದಿರದಲ್ಲಿ ನಡೆಯಿತು.


ದ..ಕ. ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಎಸ್.ಬಿ.ಜಯರಾಮ ರೈ ಬಳಜ್ಜ ಫಲಾನುಭವಿಗಳಿಗೆ ಚೆಕ್ ವಿತರಿಸಿ ಮಾತನಾಡಿ ಹೈನುಗಾರಿಕೆಯಿಂದ ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಲು ಸಾಧ್ಯ. ದ.ಕ.ಹಾಲು ಉತ್ಪಾದಕರ ಒಕ್ಕೂಟದಿಂದ ಸದಸ್ಯ ರೈತ ಮಹಿಳೆಯರಿಗೆ ಅನುಕೂಲವಾಗುವಂತೆ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಕಕ್ಕೂರಿನಲ್ಲಿ ಆರಂಭಗೊಂಡ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಅಭಿವೃದ್ಧಿ ಪಥದಲ್ಲಿ ನಡೆಯುತ್ತಿದೆ. ಮುಂದೆಯೂ ಅಭಿವೃದ್ಧಿ ಹೊಂದಲಿ ಎಂದ ಅವರು ಸಂಘಕ್ಕೆ ಅನುದಾನ ನೀಡುವ ಭರವಸೆ ನೀಡಿದರು.


ದ.ಕ.ಹಾಲು ಉತ್ಪಾದಕರ ಒಕ್ಕೂಟದ ಉಪವ್ಯವಸ್ಥಾಪಕ ಡಾ.ಸತೀಶ್ ರಾವ್ ಮಾತನಾಡಿ ಮಹಿಳೆಯರ ಸಬಲೀಕರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಈ ಯೋಜನೆಯನ್ನು ನೀಡಿದೆ. ಎಲ್ಲಾ ಫಲಾನುಭವಿಗಳು ದನ ಖರೀದಿಸಿ ಹಾಲಿನ ಉತ್ಪಾದನೆ ಹೆಚ್ಚಿಸುವಂತೆ ವಿನಂತಿಸಿದರು.
ಒಕ್ಕೂಟದ ವಿಸ್ತರಣಾಧಿಕಾರಿ ಮಾಲತಿ ಪಿ. ಒಕ್ಕೂಟದಿಂದ ಸಿಗುವ ಯೋಜನೆಗಳ ಮಾಹಿತಿ ನೀಡಿದರು. ಸಂಘದ ಅಧ್ಯಕ್ಷೆ ಶ್ರೀದೇವಿ ರೈ ಅಧ್ಯಕ್ಷತೆ ವಹಿಸಿದ್ದರು. ಜಯಪ್ರಕಾಶ್ ರೈ ಚೆಲ್ಯಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಟ್ಟಡ ಸಮಿತಿ ಸಂಚಾಲಕ ಅಚ್ಯುತ ಗೌಡ ಕಕ್ಕೂರು, ಸಂಘದ ಉಪಾಧ್ಯಕ್ಷೆ ರಜಿತಾ ಎಲ್. ಗೌಡ, ನಿರ್ದೇಶಕರುಗಳು, ಕಾರ್ಯದರ್ಶಿ ಶಾರದಾ ಕೆ. ಹಾಗೂ ಸಿಬಂದಿಗಳು, ಸದಸ್ಯರು ಉಪಸ್ಥಿತರಿದ್ದರು. ಸಂಘದ ನಿರ್ದೇಶಕಿ ನಳಿನಿ ತಲೆಪ್ಪಾಡಿ ಪ್ರಾರ್ಥಿಸಿ, ದ.ಕ.ಹಾಲು ಉತ್ಪಾದಕರ ಒಕ್ಕೂಟದ ನಳಿನಿ ಕಾರ್ಯಕ್ರಮ ನಿರೂಪಿಸಿದರು.

14 ಸದಸ್ಯರಿಗೆ ತಲಾ 46,000 ರೂ. ವಿತರಣೆ
ದ.ಕ.ಹಾಲು ಉತ್ಪಾದಕರ ಒಕ್ಕೂಟದಿಂದ ಕ್ಷೀರ ಸಂಜೀವಿನಿ ಯೋಜನೆಯಡಿ ಆಯ್ಕೆಯಾದ ಸಂಘಗಳಿಗೆ ವಿವಿಧ ಸೌಲಭ್ಯಗಳಿಗೆ ಒಟ್ಟು 7,11,000 ರೂ. ನೀಡಲಾಗುತ್ತಿದೆ. ಇದು ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಯಾಗಿದ್ದು ಬಡ್ಡಿ ರಹಿತ ಸಾಲದ ರೂಪದಲ್ಲಿ ಫಲಾನುಭವಿಗಳಿಗೆ ಕೊಡಲಾಗುತ್ತಿದೆ. ಕಕ್ಕೂರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಕ್ಷೀರ ಸಂಜೀವಿನಿ ಯೋಜನೆಯಲ್ಲಿ ದನ ಖರೀದಿಗೆ ಸಂಘದ 14 ಮಂದಿ ಸದಸ್ಯರಿಗೆ ತಲಾ 46,000 ರೂ. ವಿತರಿಸಲಾಯಿತು.

LEAVE A REPLY

Please enter your comment!
Please enter your name here