ಅಕ್ರಮ ಗೋಹತ್ಯೆ ಪ್ರಕರಣ:ಮನೆ, ಕಟ್ಟಡ ಮುಟ್ಟುಗೋಲಿಗೆ ಎಸಿಗೆ ಪೊಲೀಸರ ವರದಿ

0

ಮಂಗಳೂರು:ಉಪ್ಪಿನಂಗಡಿ, ಬಂಟ್ವಾಳ ಮತ್ತು ಬೆಳ್ತಂಗಡಿ ಠಾಣೆಗಳಲ್ಲಿ ಕರ್ನಾಟಕ ಜಾನುವಾರು ಪ್ರತಿಬಂಧಕ ಸಂರಕ್ಷಣಾ ಕಾಯ್ದೆ -2020ರಡಿ ದಾಖಲಾಗಿರುವ ಪ್ರತ್ಯೇಕ ಪ್ರಕರಣಗಳಲ್ಲಿ ವಾಸದ ಮನೆ ಹಾಗೂ ಕಟ್ಟಡವೊಂದರ ಮುಟ್ಟುಗೋಲಿಗಾಗಿ ಪೊಲೀಸರು ಉಪವಿಭಾಗದ ದಂಡಾಧಿಕಾರಿಯವರಿಗೆ ವರದಿ ಸಲ್ಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.


ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ(ಅ.ಕ್ರ.76/2025)Sec:331(4), 305 BNS, 2023 00: 4,12 ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ-2020ರಲ್ಲಿ ತನಿಖೆಯ ಸಮಯ ಆರೋಪಿ ಮೊಹಮ್ಮದ್ ಮನ್ಸೂರ್ ಎಂಬಾತ ವಧೆ ಮಾಡಿ ಮಾಂಸವನ್ನು ಮಾರಾಟ ಮಾಡುತ್ತಿದ್ದ ಸ್ಥಳವಾದ ಮಂಗಳೂರು ನಗರ ವ್ಯಾಪ್ತಿಯ ಜೆ.ಎಮ್ ರಸ್ತೆ ಭಟ್ಕಳ ಬಜಾರ್ ಬಂದರ್ ಕುದ್ರೋಳಿ ಬಳಿಯಿರುವ ಕಟ್ಟಡವನ್ನು ಕಲಂ 8 (1) ರ ಪ್ರಕಾರ ತನಿಖಾಧಿಕಾರಿಯವರು ಜಪ್ತಿ ಮಾಡಿಕೊಂಡು ಮುಟ್ಟುಗೋಲಿಗಾಗಿ ಮಂಗಳೂರು ಉಪವಿಭಾಗದ ದಂಡಾಧಿಕಾರಿಯವರಿಗೆ ವರದಿ ಮಾಡಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಈ ಕೆಳಗಿನ ಠಾಣೆಗಳಾದ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ(ಅಕ್ರ:125/2025)ವೊಂದರಲ್ಲಿ ಕಲಂ: 303(2), BNS,: ಕಲಂ: 4,12 ಕರ್ನಾಟಕ ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ-2020 ಹಾಗೂ ಕಲಂ 11(ಡಿ) ಪ್ರಾಣಿ ಹಿಂಸೆ ತಡೆ ಕಾಯ್ದೆಯಲ್ಲಿ ತನಿಖೆಯ ಸಮಯ ಬಂಟ್ವಾಳ ತಾಲೂಕು ಸಂಗಬೆಟ್ಟು ಗ್ರಾಮದ ಕೆರೆಬಳಿ ಎಂಬಲ್ಲಿ ನಾಸೀರ್ ಮತ್ತು ಇತರರು ದನವನ್ನು ತಂದು ವಧೆ ಮಾಡಿದ ಸ್ಥಳವಾದ ಇದಿನಬ್ಬರವರ ವಾಸದ ಮನೆ, ಕಸಾಯಿಖಾನೆಯ ಶೆಡ್ ಮತ್ತು ವಧೆ ಮಾಡಲು ಜಾನುವಾರನ್ನು ಕಟ್ಟಿ ಹಾಕಿದ ಶೆಡ್ ಅನ್ನು ಕಲಂ 8 (1) ರ ಪ್ರಕಾರ ತನಿಖಾಧಿಕಾರಿಯವರು ಜಪ್ತಿ ಮಾಡಿಕೊಂಡು ಮುಟ್ಟುಗೋಲಿಗಾಗಿ ಮಂಗಳೂರು ಉಪವಿಭಾಗದ ದಂಡಾಧಿಕಾರಿರವರಿಗೆ ವರದಿ ಮಾಡಿಕೊಂಡಿದ್ದಾರೆ.


ಬೆಳ್ತಂಗಡಿ ಪೊಲೀಸ್ ಠಾಣಾ ಪ್ರಕರಣ(ಅ.ಕ್ರ.103/2025)ಕಲಂ ಕಲಂ: 4, 5, 7, 12 ಕರ್ನಾಟಕ ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ-2020, 112 (2), 303(2) ಬಿಎನ್‌ಎಸ್‌ನಲ್ಲಿ ತನಿಖೆಯ ಸಮಯ ಆರೋಪಿಯು ಕೃತ್ಯಕ್ಕೆ ಬಳಸಿರುವ ಸ್ಥಳವಾದ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಬಳಿಯಿರುವ ಮಹಮ್ಮದ್ ರಫೀಕ್ ಅವರ ಮನೆ ಪ್ರಸ್ತುತ ಖಾಲಿ ಜಾಗವನ್ನು ಕಲಂ 8 (1) ರ ಪ್ರಕಾರ ತನಿಖಾಧಿಕಾರಿಯವರು ಜಪ್ತಿ ಮಾಡಿಕೊಂಡು ಮುಟ್ಟುಗೋಲಿಗಾಗಿ ಪುತ್ತೂರು ಉಪವಿಭಾಗದ ದಂಡಾಧಿಕಾರಿಯವರಿಗೆ ವರದಿ ನಿವೇದಿಸಲಾಗಿರುತ್ತದೆ.


ಈ ಹಿಂದೆ ರಾಜ್ಯದಲ್ಲಿಯೇ ಮೊದಲ ಬಾರಿಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪ್ರಕರಣ(ಅ.ಕ್ರ 123/2025) ಕಲಂ 303 ಬಿಎನ್ ಎಸ್ ಕಲಂ 4,7,12 ಗೋಸಂರಕ್ಷಣಾ ಕಾಯಿದೆ ಮತ್ತು 11(ಡಿ) ಗೋಹತ್ಯೆ ನಿಷೇಧ ಕಾಯ್ದೆ ಅಡಿಯಲ್ಲಿ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾರಿಪಳ್ಳ ಹಸನಬ್ಬರವರ ಮನೆ/ಅಕ್ರಮ ಕಸಾಯಿಖಾನೆಯನ್ನು ಮಂಗಳೂರು ಉಪವಿಭಾಗದ ದಂಡಾಧಿಕಾರಿ ಮೂಲಕ ಮುಟ್ಟುಗೋಲು ಹಾಕಲಾಗಿರುತ್ತದೆ.ಇದೀಗ ಮೇಲಿನ ಮೂರು ಪ್ರಕರಣದಲ್ಲಿ ಕರ್ನಾಟಕ ಜಾನುವಾರು ಪ್ರತಿಬಂಧಕ ಸಂರಕ್ಷಣಾ ಕಾಯ್ದೆ-2020 ಅಡಿಯಲ್ಲಿ ಕೃತ್ಯಕ್ಕೆ ಬಳಸಿರುವ ಸ್ಥಳ ಮತ್ತು ಕಟ್ಟಡಗಳನ್ನು ಜಪ್ತಿ ಮಾಡಲಾಗಿರುತ್ತದೆ.ಈ ಮೂಲಕ ಜಿಲ್ಲೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಹಾಗೂ ಅಕ್ರಮ ಚಟುವಟಿಕೆಗಳಿಗೆ ಸ್ಥಳಾವಕಾಶ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ಘಟಕದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here