ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅ.18ರಂದು ಶಿವಲಿಂಗಕ್ಕೆ ಶುದ್ಧ ಎಳ್ಳೆಣ್ಣೆ ಅಭಿಷೇಕ ನಡೆಯಲಿದೆ.
ಈ ಹಿಂದೆ ಅಷ್ಟಮಂಗಲ ಪ್ರಶ್ನಾಚಿಂತನೆಯಲ್ಲಿ ಕಂಡು ಬಂದಂತೆ ದೈವಜ್ಞರು ಉಲ್ಲೇಖಿಸಿದ ರೀತಿಯಲ್ಲೇ ದೀಪಾವಳಿಗೆ ಮುಂದೆ ಶಿವಲಿಂಗಕ್ಕೆ ಶುದ್ಧ ಎಳ್ಳೆಣ್ಣೆ ಅಭಿಷೇಕ ನಡೆಯಲಿದೆ. ಬೆಳಿಗ್ಗೆ ಗಂಟೆ 10ರಿಂದ ದೇವರಿಗೆ ಅಭಿಷೇಕ ನಡೆಯಲಿದೆ. ದೇವರಿಗೆ ಎಳ್ಳೆಣ್ಣೆ ಸಮರ್ಪಣೆ ಸೇವೆ ಮಾಡಿದವರಿಗೆ ಅಭಿಷೇಕದ ಎಣ್ಣೆಯನ್ನು ವಿತರಿಸಲಾಗುವುದು ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ತಿಳಿಸಿದ್ದಾರೆ.