ಕಾಣಿಯೂರು: ಸುಮಾರು 80 ಅಡಿ ಆಳದ ಕಣಿವೆಗೆ ಕಾರೊಂದು ಬಿದ್ದ ಘಟನೆ ಪುತ್ತೂರು- ಕಾಣಿಯೂರು- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು ಸಮೀಪ ಬೈತಡ್ಕ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಪುತ್ತೂರಿನಿಂದ ಸುಬ್ರಹ್ಮಣ್ಯ ಕಡೆಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಕಣಿವೆಗೆ ಬಿದ್ದಿದೆ ಎನ್ನಲಾಗುತ್ತಿದ್ದು, ಕಾರು ಚಾಲಕ ಮತ್ತು ಪ್ರಯಾಣಿಕರಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಪುತ್ತೂರಿನ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.
ಮಾಹಿತಿ ತಿಳಿದ ತಕ್ಷಣ ಬೆಳಂದೂರು ಗ್ರಾಮ ಪಂಚಾಯತ್ ಸದಸ್ಯ ಮೋಹನ್ ಅಗಳಿ ಹಾಗೂ ಸ್ಥಳೀಯರಾದ ಜಗದೀಶ್ ಅಗಳಿ, ಲವಪ್ರಸಾದ್ ಅಗಳಿಯವರು ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಿದರು.