ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಪ್ರಾಥಮಿಕ ವಿಭಾಗದ ಪೋಷಕರ ಸಭೆ

0

ಬಡಗನ್ನೂರು: ಅ.17ರಂದು ಪುತ್ತೂರು ದ್ವಾರಕ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುವ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿನ ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ 2025- 26ನೇ ಸಾಲಿನ ಪೋಷಕರ ಸಭೆಯು ಶಾಲಾ ಸಭಾಂಗಣದಲ್ಲಿ ನಡೆಯಿತು.

ಈ ಸಭೆಯ ಅಧ್ಯಕ್ಷತೆಯನ್ನು ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಿಘ್ನೇಶ್ ಹಿರಣ್ಯ ಇವರು ವಹಿಸಿ, ಪ್ರತಿ ಮಗುವಿನಲ್ಲಿಯೂ ವಿವಿಧ ರೀತಿಯ ಪ್ರತಿಭೆಗಳು ಅಡಗಿರುತ್ತವೆ. ಅವುಗಳನ್ನು ಗುರುತಿಸಿ ಪ್ರೋತ್ಸಾಹಿಸುವಲ್ಲಿ ಶಿಕ್ಷಕರ ಮತ್ತು ಪೋಷಕರ ಪಾತ್ರ ಬಹುಮುಖ್ಯವಾದುದು ಎಂದು ತಿಳಿಸಿದರು. ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ರಾಜಗೋಪಾಲ್ ಇವರು ಪೋಷಕರ ಸಭೆಯ ಮಹತ್ವವನ್ನು ಸಭೆಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷರಾದ ಕೇಶವ ಪ್ರಸಾದ್ ನೀಲಗಿರಿ ಉಪಸ್ಥಿತರಿದ್ದು, ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಪ್ರಾಥಮಿಕ ಶಾಲೆಯ ಶಿಕ್ಷಕರಾದ ರಾಮಚಂದ್ರಪ್ಪ ಪ್ರಾಸ್ತವಿಕ ಮಾತುಗಳೊಂದಿಗೆ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ನೆರೆದಿರುವ ಪೋಷಕರ ಪರವಾಗಿ ವಾಣಿ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಪ್ರೌಢಶಾಲಾ ವಿಭಾಗದ ಮುಖ್ಯ ಗುರುಗಳಾದ ಮಾತಾಜಿ ಸುಮನಾ ಬಿ ವಂದಿಸಿದರು. ಪ್ರಾಥಮಿಕ ಶಾಲಾ ವಿಭಾಗದ ಮಾತಾಜಿ ಜ್ಯೋತಿಯವರು ಕಾರ್ಯಕ್ರಮ ನಿರೂಪಿಸಿದರು. ಪ್ರಾಥಮಿಕ ಶಾಲಾ ವಿಭಾಗದ ಎಲ್ಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here