ಸಂತ ಫಿಲೋಮಿನಾ ಪ.ಪೂ ಕಾಲೇಜಿನ ಆಶ್ರಯದಲ್ಲಿ ಪುತ್ತೂರು ತಾಲೂಕು ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ – 2025′

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ಪುತ್ತೂರು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ
ಪುತ್ತೂರು ತಾಲೂಕು ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ – 2025′  ಸ್ಪರ್ಧೆಯು ಅ.18ರಂದು ಸಂತ ಫಿಲೋಮಿನಾ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು.


ಕ್ರೀಡಾಕೂಟದ ಉದ್ಘಾಟನೆಯನ್ನು ನೆರವೇರಿಸಿದ ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ.ಫಾ.ಲಾರೆನ್ಸ್ ಮಸ್ಕರೇನಸ್ ಮಾತನಾಡಿ, ಕ್ರೀಡೆಯು ವಿದ್ಯಾರ್ಥಿಗಳಿಗೆ ಕಲಿಕೆಯ ಜೊತೆಗೆ ದೈಹಿಕವಾಗಿ ಸದೃಢವಾಗಿ ಬೆಳೆಯಲು ಸಹಕರಿಸುತ್ತದೆ. ಕ್ರೀಡೆ ಕ್ರೀಡಾಪಟುಗಳಿಗೆ ಶಿಸ್ತು, ನಿಯಮ ಪಾಲನೆ, ಧೈರ್ಯ, ಸಹನೆ, ಸೋಲು ಗೆಲುವಿನ ಸಮಾನ ಸ್ವೀಕಾರ ಮುಂತಾದ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಹಾಗೂ ಎಲ್ಲರೊoದಿಗೆ ಸಮಾನವಾಗಿ ಹಂಚಿಕೊಂಡು ಬೆಳೆಯುವ ಗುಣವನ್ನು ಬೆಳೆಸುತ್ತದೆ ಎಂದು ಹೇಳಿ ಕ್ರೀಡಾಪಟುಗಳಿಗೆ ಶುಭಹಾರೈಸಿದರು.


ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಪುತ್ತೂರು ತಾಲೂಕು ಕ್ರೀಡಾ  ಸಂಯೋಜಕರು ಹಾಗೂ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಕರಾದ ಡಾ. ಜ್ಯೋತಿ ಮತ್ತು ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.


ಪುತ್ತೂರು ತಾಲೂಕು ಮಟ್ಟದ ಒಟ್ಟು 8 ಪ. ಪೂ ಕಾಲೇಜಿನ 135 ಕ್ರೀಡಾಪಟುಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ತಾಲೂಕಿನ ವಿವಿಧ ಕಾಲೇಜಿನ ದೈಹಿಕ ಶಿಕ್ಷಕರು, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ.ಏಲಿಯಾಸ್ ಪಿಂಟೋ, ರಾಜೇಶ್ ಮೂಲ್ಯ, ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ, ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ಅತಿಥಿಗಳನ್ನು ಸ್ವಾಗತಿಸಿ, ವಿದ್ಯಾರ್ಥಿನಿ ಏಂಜಲಿಕ ಪಿಂಟೋ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ.ಏಲಿಯಾಸ್ ಪಿಂಟೋ, ವಂದಿಸಿ, ಉಪನ್ಯಾಸಕರಾದ ಉಷಾ ಎ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here