ಕಾಣಿಯೂರು: ಜೀರ್ಣೋದ್ಧಾರದ ಕಾರ್ಯ ನಡೆಯುತ್ತಿರುವ ಚಾರ್ವಾಕ ಗ್ರಾಮದ ಕೊರಿಯಾನ ಬ್ರಹ್ಮಬೈದರ್ಕಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಅ 18ರಂದು ಭೇಟಿ ನೀಡಿ ಅಭಿವೃದ್ಧಿ ಕಾರ್ಯವನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರದ ಸೇವಾ ಟ್ರಸ್ಟಿನ ಅಧ್ಯಕ್ಷರಾದ ಸತ್ಯನಾರಾಯಣ ಕಲ್ಲೂರಾಯ, ಕಾಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಿಶ್ವನಾಥ ಕೊಪ್ಪ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಟ್ರಸ್ಟಿನ ಉಪಾಧ್ಯಕ್ಷ ವಸಂತ ದಲಾರಿ, ಟ್ರಸ್ಟಿನ ಕಾರ್ಯದರ್ಶಿ ಬಾಲಕೃಷ್ಣ ರೈ ಕಾಸ್ಪಾಡಿಗುತ್ತು, ಸ್ವಯಂಸೇವಕ ಸಮಿತಿ ಅಧ್ಯಕ್ಷ ನಂದನ್ ಕಜೆ,. ಪಿ ಎಲ್ ಡಿ ಬ್ಯಾಂಕಿನ ನಿರ್ದೇಶಕಿ ಚಂದ್ರಾವತಿ ಅಭಿಕಾರ, ಚಾರ್ವಾಕ ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಧನಂಜಯ ಕೇನಾಜೆ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಇಡ್ಯಡ್ಕ, ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಕುಸುಮಾದರ ಇಡ್ಯಡ್ಕ, ಚಾರ್ವಾಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಲೋಕೇಶ ಎಣ್ಮೂರು, ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಪರಮೇಶ್ವರ ಅನಿಲ, ಗೋಪಾಲಕೃಷ್ಣ ಅಭಿಕಾರ, ವಿಶ್ವನಾಥ ದೇವಿನಗರ, ಗೋಪಾಲಕೃಷ್ಣ ಬಾರೆಂಗಳ, ರಾಮಣ್ಣ ಗೌಡ ಪೊನ್ನೆತ್ತಡಿ, ರಾಮಚಂದ್ರ ಕೋಲ್ಪೆ, ನಾರ್ಣಪ್ಪ ಗೌಡ ಜತ್ತೋಡಿ, ಬೆಳ್ಳಿಯಪ್ಪ ಗೌಡ ದೇವರಮಾರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.