ಪುತ್ತೂರು: ಶ್ರೀಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀವಿಧುಶೇಖರ ಭಾರತೀ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಬೆಳ್ಳಿಪ್ಪಾಡಿ ಧರ್ಮಾಭ್ಯುದಯ ಧರ್ಮ ಶಿಕ್ಷಣದ ಉದ್ಘಾಟನಾ ಸಮಾರಂಭ ಅ.19ರಂದು ಬೆಳಿಗ್ಗೆ 10.00ಕ್ಕೆ ಬೆಳ್ಳಿಪ್ಪಾಡಿ ಶ್ರೀಸುಬ್ರಹ್ಮಣ್ಯ ಭಜನಾ ಮಂದಿರದಲ್ಲಿ ನಡೆಯಲಿದೆ.
ಜಗದ್ಗುರು ಶ್ರೀಶಂಕರಾಚಾರ್ಯ ಸ್ಥಾಪಿತ ಶೃಂಗೇರಿ ಪೀಠದ ಮಾರ್ಗದರ್ಶನದಲ್ಲಿ ಹಿಂದೂ ಧರ್ಮ ಶಿಕ್ಷಣವನ್ನು ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರು ಚಾಲನೆ ನೀಡಲಿದ್ದಾರೆ. ವಾರದಲ್ಲಿ 2 ಗಂಟೆ ಧರ್ಮ ಶಿಕ್ಷಣ ತರಗತಿಗೆ ತಮ್ಮ ಮಕ್ಕಳನ್ನು ಕಳುಹಿಸಿಕೊಡುವಂತೆ ಬೆಳ್ಳಿಪ್ಪಾಡಿ ಧರ್ಮಾಭ್ಯುದಯ ಧರ್ಮ ಶಿಕ್ಷಣ ಸಮಿತಿಯ ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿ/ಪದಾಧಿಕಾರಿಗಳು ಮತ್ತು ಸದಸ್ಯರು ತಿಳಿಸಿದ್ದಾರೆ.