ಪುತ್ತೂರು: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುದ್ಮಾರು ಇಲ್ಲಿನ ಹಿರಿಯ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ನ್ಯೂಸ್ ಕಾರ್ಕಳ ವ್ಯವಸ್ಥಾಪಕ ನಿರ್ದೇಶಕ, ಪ್ರಗತಿ ಚಾರಿಟೇಬಲ್ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ರಾಮಚಂದ್ರ ಬರೆಪ್ಪಾಡಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಾಗೇಶ್ ಕೆಡೆಂಜಿ ಅವರನ್ನು ಆಯ್ಕೆ ಮಾಡಲಾಯಿತು.
ಅ.19ರಂದು ಕುದ್ಮಾರು ಶಾಲೆಯಲ್ಲಿ ನಡೆದ ಹಿರಿಯ ವಿದ್ಯಾರ್ಥಿ ಸಂಘದ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಉಪಾಧ್ಯಕ್ಷರಾಗಿ ಬಾಲಚಂದ್ರ ನೂಜಿ, ಜೊತೆ ಕಾರ್ಯದರ್ಶಿಯಾಗಿ ದಾಮೋದರ ನಾಕಿರಣ, ಕೋಶಾಧಿಕಾರಿಯಾಗಿ ಯಶೋಧರ ಕೆಡೆಂಜಿಕಟ್ಟ ಅವರು ಆಯ್ಕೆಗೊಂಡರು. ಉಳಿದಂತೆ 40 ಮಂದಿ ಹಿರಿಯ ವಿದ್ಯಾರ್ಥಿಗಳನ್ನು ಕಾರ್ಯಕಾರಿ ಸಮಿತಿಗೆ ಆಯ್ಕೆ ಮಾಡಲಾಯಿತು.
ಬೆಳಂದೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಲೋಹಿತಾಕ್ಷ, ಎಸ್ಡಿಎಂಸಿ ಅಧ್ಯಕ್ಷ ದೇವರಾಜ್ ನೂಜಿ, ಮಾಜಿ ಅಧ್ಯಕ್ಷೆ ನವ್ಯಾ ಅನ್ಯಾಡಿ, ಕುದ್ಮಾರು ಗ್ರಾಮಸಹಾಯಕ ಯೋಗೀಶ್ ಬರೆಪ್ಪಾಡಿ, ಹಿರಿಯ ವಿದ್ಯಾರ್ಥಿ ಬಾವು ನೂಜೋಲ್ತಡ್ಕ, ಮುಖ್ಯಶಿಕ್ಷಕಿ ಶ್ರೀಲತಾ, ಶಿಕ್ಷಕಿ ವೀಣಾ, ಕೂರ ಅಂಗನವಾಡಿ ಶಿಕ್ಷಕಿ ವಸಂತಿ ನೂಜಿ, ಸಹಶಿಕ್ಷಕರು, ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.