ಬಡಗನ್ನೂರು: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಾತ್ರಿ ನಿವಾಸ ಕಾರ್ಯಕ್ರಮದ ಬಿಡುಗಡೆ ಕಾರ್ಯಕ್ರಮ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ಗುರುಪೂಜೆ ಸಲ್ಲಿಸಿದ ನಂತರ ಶ್ರೀ ಗೋಕರ್ಣನಾಥ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜೈರಾಜ್ ಸೋಮ ಸುಂದರಂ ಬಿಡುಗಡೆಗೊಳಿಸಿದರು ಶುಭಹಾರೖೆಸಿದರು.

ಗೆಜ್ಜೆಗಿರಿ ಅಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ ಪ್ರಾಸ್ತಾವಿಕವಾಗಿ ಮಾತನಾಡಿ ಗೆಜ್ಜೆಗಿರಿ ಯಾತ್ರಿ ನಿವಾಸ ವಿಶ್ವಾದ್ಯಂತ ಇರುವ ದೇಯಿ ಬೈದ್ಯೆತಿ ಕೋಟಿ ಚೆನ್ನಯರ ಮೂಲಸ್ಥಾನವಾದ ಗೆಜ್ಜೆಗಿರಿಯ ಭಕ್ತರಿಗೆ ಅನುಕೂಲಕ್ಕಾಗಿ ನಿರ್ಮಿಸಲಾಗುತ್ತಿದೆ. ಶ್ರೀ ಕ್ಷೇತ್ರದ ಭಕ್ತರು ಸರ್ವ ರೀತಿಯ ಸಹಕಾರ ನೀಡಬೇಕು ಎಂದು ಹೇಳಿದರು. ಟ್ರಸ್ಟ್ ನ ಗೌರವಾಧ್ಯಕ್ಷ ಡಾ.ರಾಜಶೇಖರ್ ಕೋಟ್ಯಾನ್ ವಿಶ್ವದ ಬಿಲ್ಲವರು ಸೇರಿ ನಿರ್ಮಿಸಿದ ಗೆಜ್ಜೆಗಿರಿ ಕ್ಷೇತ್ರ ಇಂದು ವಿಶ್ವ ಪ್ರಸಿದ್ಧಿಯನ್ನು ಪಡೆದಿದೆ ಎಂದು ಹೇಳಿದರು.
ಕ್ಷೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆರವರು ಗೆಜ್ಜೆಗಿರಿ ಕ್ಷೇತ್ರದ ಪ್ರಾರಂಭದ ದಿನಗಳಿಂದ ಕ್ಷೇತ್ರದ ಭಕ್ತರ ಪರವಾಗಿ ಕ್ಷೇತ್ರಾಡಳಿತ ಉತ್ತಮವಾಗಿ ಕೆಲಸ ಮಾಡುತ್ತಿದೆ ಮುಂದೆ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ನಡೆಯಲಿದ್ದು ತಮ್ಮೆಲ್ಲರ ಸಹಕಾರ ಆಗತ್ತವಿದೆ ಎಂದು ಹೇಳಿದರು.
ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ರವಿಪೂಜಾರಿ ಚಿಲಿಂಬಿರವರು ಮಾತನಾಡಿ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಸಾಮಾಜಿಕ ಅಭಿವೃದ್ಧಿಗೆ ಪೂರಕವಾಗಿ ಕ್ಷೇತ್ರಾಡಳಿತ ಸಮಿತಿ ಕೆಲಸ ಮಾಡಲಿದೆ ಎಂದರು.
ಕಾರ್ಯಕ್ರಮದಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್ ಪೂಜಾರಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಅಭಿವೃದ್ಧಿ ಟ್ರಸ್ಟ್ ನ ಕೋಶಾಧಿಕಾರಿಗಳಾದ ಉಲ್ಲಾಸ್ ಕೋಟ್ಯಾನ್, ಹರೀಶ್ ಸಾಲ್ಯಾನ್ ಬಜಗೋಳಿ, ಕ್ಷೇತ್ರಾಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಡಾ. ರಾಜಾರಾಮ್, ಉಪಾಧ್ಯಕ್ಷ ದೀಪಕ್ ಕೋಟ್ಯಾನ್, ಕೋಶಾಧಿಕಾರಿ ಮೋಹನ್ ದಾಸ್ ಬಂಗೇರ, ಜೊತೆ ಕಾರ್ಯದರ್ಶಿ ಜಯವಿಕ್ರಂ ಕಲ್ಲಾಪು, ಪ್ರಮುಖರಾದ ಶೈಲೇಂದ್ರ ಸುವರ್ಣ, ಸುಜಿತ ವಿ ಬಂಗೇರ, ಜಯಾನಂದ ಪೂಜಾರಿ, ಲೀಲಾಕ್ಷ ಕರ್ಕೇರ, ಚಂದ್ರ ಶೇಖರ್ ಉಚ್ಚಿಲ್, ರಾಜೇಂದ್ರ ಚಿಲಿಂಬಿ, ಹರೀಶ್ ಕೆ ಪೂಜಾರಿ, ನಾರಾಯಣ ಮಚ್ಚಿನ, ವಿದ್ಯಾ ರಾಕೇಶ್, ದಿನೇಶ್ ಅಂಚನ್, ಸುರೇಶ್ ಪೂಜಾರಿ, ಚಂದ್ರಶೇಖರ್ ಪೂಜಾರಿ ಬಂಟ್ವಾಳ ಮತ್ತಿತರರು ಉಪಸ್ಥಿತರಿದ್ದರು.